ವ್ಹಿಲಿಂಗ್ ಮಾಡುವವರ ವಿರುದ್ಧ ಪೊಲೀಸರ ವಿಶೇಷ ಕಾರ್ಯಾಚರಣೆ

ಬೆಂಗಳೂರು

      ರಂಜಾನ್ ಮಾಸದ ಹಿನ್ನೆಲೆಯಲ್ಲಿ ನಡೆದ ಶೆಬೆಬರತ್ ಜಾಗರಣೆ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ವ್ಹೀಲಿಂಗ್ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡ ಉತ್ತರ ವಿಭಾಗದ ಸಂಚಾರ ಪೊಲೀಸರು 30ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

       ಉತ್ತರ ವಿಭಾಗದ ಹೆಬ್ಬಾಳ, ಆರ್.ಟಿ ನಗರ, ಯಲಹಂಕ, ಚಿಕ್ಕಜಾಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ರಾತ್ರಿಯಿಡಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ವ್ಹೀಲಿಂಗ್ ಮಾಡುತ್ತಿದ್ದ 30 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

      ವ್ಹೀಲಿಂಗ್ ಮಾಡುತ್ತಿದ್ದ 50ಕ್ಕೂ ಹೆಚ್ಚು ಯುವಕರನ್ನು ವಿಚಾರಣೆಗೊಳಪಡಿಸಿ ಅವರ ಪೋಷಕರನ್ನು ಠಾಣೆಗೆ ಕರೆಸಲಾಗಿದೆ. ಕೆಲವು ವ್ಹೀಲಿಂಗ್ ಮಾಡುತ್ತಿದ್ದ ಯುವಕರು ದ್ವಿಚಕ್ರ ವಾಹನಗಳನ್ನು ಬಿಟ್ಟು ಪರಾರಿಯಾಗಿದ್ದು, ಅವುಗಳನ್ನು ವಶಪಡಿಸಿಕೊಂಡು ಅವುಗಳ ಮಾಲೀಕರ ಪತ್ತೆ ಕಾರ್ಯ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಸಾರಾ ಫಾತಿಮಾ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link