ಚಿತ್ರದುರ್ಗ:
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಜನಸಂಕರ್ಪ ಸಭೆಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಲ್ಲಾಭಕ್ಷ್ ಸಂಧ್ಯಾಸುರಕ್ಷಾ ವೇತನಕ್ಕಾಗಿ ಮಹಿಳೆಯರಿಂದ ಅರ್ಜಿಗಳನ್ನು ಸ್ವೀಕರಿಸಿದರು.
ಅರ್ಜಿಗಳನ್ನು ಸ್ವೀಕರಿಸಿ ಮಾತನಾಡಿದ ಸೈಯದ್ ಅಲ್ಲಾಭಕ್ಷ್ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಡವರಿಗಾಗಿ ಜಾರಿಗೆ ತಂದಿರುವ ಹಲವಾರು ಯೋಜನೆಗಳನ್ನು ದಲಿತರು, ಅಲ್ಪಸಂಖ್ಯಾತರು, ಶೋಷಿತರು, ಹಿಂದುಳಿದವರಿಗೆ ತಲುಪಿಸುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ.
ಸಂಧ್ಯಾಸುರಕ್ಷಾ, ವಿಧವಾವೇತನ, ವೃದ್ದಾಪ್ಯ ವೇತನ, ಅಂಗವಿಕಲ ವೇತನ ಹೀಗೆ ಸರ್ಕಾರದ ಹತ್ತು ಹಲವಾರು ಯೋಜನೆಗಳಿಗಾಗಿ ಅರ್ಜಿ ಸಲ್ಲಿಸುವವರನ್ನು ಸಂಬಂಧಪಟ್ಟಿ ಇಲಾಖೆಗೆ ಕರೆದುಕೊಂಡು ಹೋಗಿ ಸರ್ಕಾರದ ಸವಲತ್ತುಗಳನ್ನು ದೊರಕಿಸುವ ಕೆಲಸ ಮಾಡಿಕೊಂಡು ಬರಲಾಗುತ್ತಿದೆ. ಹಿಂದಿನ ಸರ್ಕಾರದ ಎಲ್ಲಾ ಯೋಜನೆಗಳು ಈಗಿನ ಸಮ್ಮಿಶ್ರ ಸರ್ಕಾರದಲ್ಲಿ ಮುಂದುವರೆಯುತ್ತಿವೆ. ಯಾರೂ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಸೈಯದ್ ಅಲ್ಲಾಭಕ್ಷ್ ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಾಂದ್‍ಪೀರ್, ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಅಧ್ಯಕ್ಷ ಹಸನ್‍ತಾಹೀರ್, ನಾಸಿರುದ್ದಿನ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ