ಫೆ.16ರಂದು ಪಡಿತರ ವಿತರಕರ ರಾಜ್ಯ ಸಮ್ಮೇಳನ

ದಾವಣಗೆರೆ

        ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಫೆ.16ರಂದು ಬೆಳಿಗ್ಗೆ 10.30ಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ 33ನೇ ವಾರ್ಷಿಕೋತ್ಸವ ರಾಜ್ಯ ಸರ್ಕಾರಕ್ಕೆ ಕೃತಜ್ಞತಾ ಸಮರ್ಪಣಾ ಸಮಾರಂಭ ಹಾಗೂ ರಾಜ್ಯ ಮಟ್ಟದ ಸಮ್ಮೇಳನ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಡಾ.ಟಿ.ಕೃಷ್ಣಪ್ಪ ತಿಳಿಸಿದರು.

       ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಆಹಾರ ಮತ್ತು ಗ್ರಾಹಕರ ವ್ಯವಹಾರ, ಸಾರ್ವಜನಿಕ ವಿತರಣೆ ಇಲಾಖೆಯ ಕೇಂದ್ರ ಸಚಿವ ರಾಮ್‍ವಿಲಾಸ್ ಪಾಸ್ವಾನ್ ಭಾಗವಹಿಸುವರು. ಸಮ್ಮೇಳನ ಸಂಚಿಕೆಯನ್ನು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಬಿ.ಜಡ್.ಜಮೀರ್ ಅಹ್ಮದ್ ಬಿಡುಗಡೆ ಮಾಡುವರು. ವಿಶೇಷ ಆಹ್ವಾನಿತರಾಗಿ ಮಾಜಿ ಸಿಎಂ ಸಿದ್ದರಾಮಯ್ಯ, ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ನರೇಂದ್ರ ಭಾಗವಹಿಸುವರು ಎಂದರು.

       ಅತಿಥಿಗಳಾಗಿ ಪಡಿತರ ವಿತರಕರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಕಾಕಾ ದೇಶಮುಖ್, ರಾಷ್ಟ್ರೀಯ ಕಾರ್ಯದರ್ಶಿ ಬಿಸೆಂದರ್ ಬಸು, ರಾಷ್ಟ್ರೀಯ ಉಪಾಧ್ಯಕ್ಷ ಪ್ರಹ್ಲಾದ್ ಭಾಯಿ ಮೋದಿ, ಆಹಾರ ಮತ್ತು ನಾಗರೀಕರ ಸರಬರಾಜು ಗ್ರಾಹಕ ವ್ಯವಹಾರ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಂ.ವಿ.ಸಾವಿತ್ರಿ, ಆಯುಕ್ತ ಟಿ.ಹೆಚ್.ಎಂ.ಕುಮಾರ್, ಕೆ.ಹೇಮಾಜಿ ನಾಯಕ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

      ನ್ಯಾಯಬೆಲೆ ಅಂಗಡಿಗಳ ಮಾಲೀಕರಿಗೆ ಮೊದಲು ನೀಡುತ್ತಿದ್ದ 83 ರೂ. ಕಮಿಷನ್ ಅನ್ನು 100 ರೂಗಳಿಗೆ ಹೆಚ್ಚಿಸಿರುವ ಕರ್ನಾಟಕ ಸರ್ಕಾರಕ್ಕೆ ಪಡಿತರ ವಿತರಕರಿಂದ ಕೃತಜ್ಞತೆ ಸಮರ್ಪಣೆ ಮಾಡುವುದರ ಮೂಲಕ ಇನ್ನೂ ಕಮಿಷನ್ ಹೆಚ್ಚಿಸಬೇಕು. ಪಡಿತರ ವಿತರಣೆ ವ್ಯವಸ್ಥೆಯಲ್ಲಿ ಈ ಹಿಂದೆ ವಿತರಿಸುತ್ತಿದ್ದ ಸಕ್ಕರೆ, ಸೂರ್ಯಕಾಂತಿ ಎಣ್ಣೆ, ಉಪ್ಪು ಮತ್ತಿತರೆ ಸಾಮಗ್ರಿಗಳನ್ನು ಮತ್ತೆ ವಿತರಿಸಲ

       ಆರಂಭಿಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಲಾಗುವುದು. ಆದ್ದರಿಂದ ಜಿಲ್ಲೆಯ ಎಲ್ಲಾ ಪಡಿತರ ವಿತರಕರು ಈ ಸಮ್ಮೇಳನದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ಸಂಘದ ಹನುಮಂತಪ್ಪ, ಎನ್.ಓಮಣ್ಣ, ನಟರಾಜ್, ಕೆ.ನಾರಪ್ಪ, ಎಂ.ಆರ್.ಪುಟ್ಟಣ್ಣ, ಗಂಗರಾಜು, ರುದ್ರಮುನಿ, ಎಸ್.ಜಿ.ಬಸವರಾಜ, ಎಂ.ಡಿ.ರಸೂಲ್ ಸಾಬ್, ಪುಟ್ಟರಾಜು ಕೆ.ಟಿ. ಮತ್ತಿತರರು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ