ಬಸ್ಸಿನಲ್ಲಿ ಬೆಂಕಿ: ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು

ಬೆಂಗಳೂರು

          ಗಡಿ ಭಾಗದ ತಮಿಳುನಾಡಿನ ಹೊಸೂರಿನಿಂದ ನಗರದ ಕಡೆ ಬರುತ್ತಿದ್ದ ಖಾಸಗಿ ಬಸ್‍ನಲ್ಲಿ ಏಕಾಎಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರೆಲ್ಲಾ ಆಪಾಯದಿಂದ ಪಾರಾಗಿದ್ದಾರೆ.

       ಹೊಸೂರು ಕೃಷ್ಣಗಿರಿ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 7ರಲ್ಲಿ ತಮಿಳುನಾಡಿನ ತೂಪುರ್ ಬಳಿ ಕೆ.ಪಿ.ಎನ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪ್ರಯಾಣಿಕರನ್ನು ಕರೆದುಕೊಂಡು ಮಧುರೈನಿಂದ ಬೆಂಗಳೂರಿಗೆ ಸೋಮವಾರ ಬೆಳಿಗ್ಗೆ ಬರುತ್ತಿದ್ದಾಗ ಇಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

         ಬೆಂಕಿಯನ್ನು ಗಮನಿಸಿದ ಬಸ್ ಚಾಲಕ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸಿ ದೂರ ಕಳುಹಿಸಿದ್ದ ನೋಡು ನೋಡುತ್ತಿದ್ದಂತೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.ಬಸ್ಸಿನಲ್ಲಿ ಸುಮಾರು 40ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು. ಸದ್ಯ ಚಾಲಕನ ಸಮಯ ಪ್ರಜ್ಞೆಯಿಂದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

         ಈ ಘಟನೆಯಿಂದ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದ್ದು, ಸ್ಥಳಕ್ಕೆ ಕೃಷ್ಣಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link