ಕಲರವ ಇಪ್ಪತ್ತು ವಸಂತಗಳ ಮೆಲುಕು ಕಾರ್ಯಕ್ರಮ

ಗುಬ್ಬಿ

         ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುವುದರ ಜೊತೆಗೆ ಉತ್ತಮ ಮೌಲ್ಯಗಳನ್ನು ಕಲಿಯುವತ್ತ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ವೆಂಕಟೇಶಪ್ಪ ಕರೆನೀಡಿದರು.

         ಪಟ್ಟಣದ ವಿವೇಕಾನಂದ ವಿದ್ಯಾಪೀಠ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ ಕಲರವ ಇಪ್ಪತ್ತು ವಸಂತಗಳ ಮೆಲುಕು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ನಮ್ಮ ಹಿರಿಯರ ಸಾಧನೆಗಳು ಮಾರ್ಗಧರ್ಶನಗಳಾಗಬೇಕು ಆ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವತ್ತ ಚಿಂತನೆ ನಡೆಸಬೇಕಿದೆ ಎಂದು ತಿಳಿಸಿದರು.

          ವಿದ್ಯಾರ್ಥಿಗಳು ಮೊಭೈಲ್ ಮತ್ತು ದೂರಧರ್ಶನಗಳಿಂದ ದೂರವಿರುವಂತೆ ಪೋಷಕರು ಗಮನಹರಿಸಬೇಕಾಗಿದೆ ಈ ಎರಡು ಸಾಧನಗಳು ಎಷ್ಟು ಒಳ್ಳೆಯವೂ ಅಷ್ಟೆ ಮಾರಕವಾಗಿವೆ ಮಕ್ಕಳ ಮನಸ್ಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು ಈ ಬಗ್ಗೆ ಪೋಷಕರು ಅಗತ್ಯ ಎಚ್ಚರಿಕೆ ವಹಿಸುವಂತೆ ತಿಳಿಸಿದ ಅವರು ಸ್ವಾಮಿ ವಿವೇಕಾನಂದರು, ಅಬ್ದುಲ್ ಕಲಾಂ ರಂತಹ ಮಹನೀಯರ ಸಾಧನೆಗಳ ಬಗ್ಗೆ ಸಮಗ್ರವಾದ ಮಾಹಿತಿಗಳನ್ನು ಶಿಕ್ಷಣದ ಜೊತೆಗೆ ಮಕ್ಕಳಿಗೆ ನೀಡಿದಾಗ ಮಕ್ಕಳು ಸರ್ವತೋಮುಖವಾಗಿ ಅಭಿವೃಧ್ದಿ ಹೊಂದಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

          ಮಕ್ಕಳಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸಬೇಕಿದೆ ಪುಸ್ತಕಗಳನ್ನು ಓದುವುದರಿಂದ ಮಕ್ಕಳ ಜ್ಞಾನ ಬೆಳೆಯುವುದರ ಜೊತೆಗೆ ಶೈಕ್ಷಣಿಕ ಪ್ರಗತಿಯು ಉತ್ತಮಗೊಳ್ಳಲಿದೆ ಎಂದು ತಿಳಿಸಿದರು.

          ಇದೇ ಸಂದರ್ಭದಲ್ಲಿ ಶಾಲೆಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರನ್ನು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಕ್ಕಳಿಂದ ವಿವಿಧ ಸಾಂಸ್ಕತಿಕ ಮನರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

        ಕಾರ್ಯಕ್ರಮದಲ್ಲಿ ಇ ಜ್ಞಾನ ಟ್ರಸ್ಟ್‍ನ ಕಾರ್ಯದರ್ಶಿ ಮತ್ತು ಲೇಖಕರಾದ ಟಿ.ಜಿ.ಶ್ರೀನಿಧಿ, ಖ್ಯಾತ ವೈಧ್ಯರು ಮತ್ತು ದೂರಧರ್ಶನದ ಥಟ್ ಅಂತ ಹೇಳಿ ಕಾರ್ಯಕ್ರಮದ ಡಾ:ನಾ.ಸೋಮೇಶ್ವರ್, ಉಪನ್ಯಾಸಕಿ ಡಾ:ವತ್ಸಲಾ ಮೋಹನ್, ಹಿನ್ನೆಲೆ ಗಾಯಕ ಅನನ್ಯ ಭಟ್, ಎಸ್.ವಿ.ಎಸ್.ಎಜುಕೇಶನ್ ಟ್ರಸ್ಟ್‍ನ ಕಾರ್ಯದರ್ಶಿ ಜಿ.ಎಸ್.ಅರುಣ್ ಕುಮಾರ್ ಮುಂತಾದವರು ಭಾಗವಹಿಸಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link