ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮ:ಎಚ್.ಡಿ. ಕುಮಾರ ಸ್ವಾಮಿ

ಬೆಂಗಳೂರು

     ಕೃಷಿ, ತೋಟಗಾರಿಕೆ, ಲೋಕೋಪಯೋಗಿ ಹಾಗೂ ಪಶುಸಂಗೋಪನೆ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ತಿಳಿಸಿದ್ದಾರೆ.

      ಈ ಕುರಿತು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ವಿವರವಾದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದರು.

      ನಂತರ, ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿಗಳು ತಿಳಿಸಿದರು.

      ಸಭೆಯಲ್ಲಿ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ|| ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ|| ಇ.ವಿ.ರಮಣರೆಡ್ಡಿ, ಲೋಕೋಪಯೋಗಿ ಮತ್ತು ಒಳಾಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ||ರಜನೀಶ್ ಗೋಯಲ್ ಸಭೆಯಲ್ಲಿ ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap