ತಿಪಟೂರು
ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಿ, ಮಕ್ಕಳ ಭವಿಷ್ಯವನ್ನು ಉಜ್ವಲವಾಗಿ ರೂಪಿಸಬೇಕಾದರೆ ಮಕ್ಕಳಿಗೆ ಉತ್ತಮ ನೆರೆಹೊರೆ ಮತ್ತು ಸುರಕ್ಷಿತ ವಾತಾವರಣ ಕಲ್ಪಿಸುವುದು ನಮ್ಮೆಲ್ಲರ ಜವಬ್ದಾರಿ – ಎಂಬ ಘೋಷ ವಾಕ್ಯದೊಂದಿಗೆ 2018 ರ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳ ಹಕ್ಕುಗಳ ಸಪ್ತಾಹವನ್ನು ಮಕ್ಕಳ ಸಹಾಯವಾಣಿ-1098 ಭಾರತದಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ತಿಪಟೂರು ಮಕ್ಕಳ ಸಹಾಯವಾಣಿ, ಬದುಕು ಸಂಸ್ಥೆಯು ತಾಲ್ಲೋಕ್ ಕಾನೂನು ಸೇವಾ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ತಿಪಟೂರು & ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಮಣಿಕಿಕೆರೆಯ ಶ್ರೀ ಭುವನೇಶ್ವರಿ ಫ್ರೌಢಶಾಲೆಯಲ್ಲಿ ಸಪ್ತಾಹದ ಉದ್ಘಾಟನಾ ಸಮಾರಂಭನೆರೆವೇರಿತು. ಕಾರ್ಯಕ್ರಮ ಉದ್ಘಾಟಿಸಿದ ತಾಲ್ಲೊಕ್ ಮಹಿಳಾ ಸಂರಕ್ಷಣಾಧಿಕಾರಿ ಶ್ರೀಲತಾ ಅವರು ಮಾತನಾಡಿ ಬಾಲ್ಯವಿವಾಹ, ಬಾಲ ಕಾರ್ಮಿಕತೆ ಮತ್ತು ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯಗಳ ಬಗ್ಗೆ ವಿವರಿಸಿ, ಮಕ್ಕಳ ಭವಿಷ್ಯ ರೂಪಿಸುವಲ್ಲಿ ಮಕ್ಕಳ ಮತ್ತು ಶಿಕ್ಷಕರ ಪಾತ್ರದ ಬಗ್ಗೆ ವಿವರಿಸಿದರು.
ಪ್ರಾಸ್ತಾವಿಕ ಮಾತುಗಳನ್ನಾಡಿದ ಮಕ್ಕಳ ಸಹಾಯವಾಣಿ ನಿರ್ದೇಶಕ ಬಿ.ಎಸ್. ನಂದಕುಮಾರ್ ಪ್ತಸ್ತುತ ನಾವು ಯಾರ ಮೇಲೂ ದೂರನ್ನು ಮಾಡದೇ ನಮ್ಮ ಗುರಿಯ ಕಡೆ ನಾವೇ ಸಾಗಬೇಕು. ವಿದ್ಯಾರ್ಥಿ ದಿಸೆಯಲ್ಲಿ ಎದುರಾಗುವ ಸವಾಲುಗಳ ಬಗ್ಗೆ ಉದಾಹರಣೆಗಳ ಸಹಿತ ವಿವಿರಿಸಿದರು. ನಾವು ಕೇವಲ ಮನಸ್ಸಿನ ಮಾತನ್ನು ಕೇಳದೆ ವಿವೇಕದಿಂದ ಬುದ್ದಿಯ ಮಾತನ್ನ ಕೇಳಿ ಸರಿ- ತಪ್ಪುಗಳ ವಿಶ್ಲೇಷಣೆ ಮಾಡಿ ಯಾವುದೇ ಕೆಲಸ ಮಾಡಿ. ಪ್ರತಿ ಕೆಲಸ ಮಾಡುವಾಗ ನಮ್ಮ ತಂದೆ- ತಾಯಿ, ಮನೆಯ ಮನಸ್ಥಿತಿಯನ್ನು ನೆನಪಿಸಿಕೊಂಡರೆ ಮಕ್ಕಳು ಯಾವುದೇ ಕಾರಣಕ್ಕೂ ತಮ್ಮ ಗುರಿಯಂದ ವಿಚಲಿತರಾಗುವುದಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿಗಳಾದ ಅಮರ್ ಸಿಂಗ್ ಮಾತನಾಡಿ ಮಕ್ಕಳು ಯಾವುದೇ ಕಾರಣಕ್ಕೂ ಶಾಲೆಯಿಂದ ಹೊರಗುಳಿಯಬಾರದು ಎಂದು ತಿಳಿಸಿದರು. ಅದರಲ್ಲೂ ವಿಶೇಷವಾಗಿ ಹೆಣ್ಣು ಮಕ್ಕಳು ಶಾಲೆಯನ್ನು ಅರ್ಧದಲ್ಲಿ ನಿಲ್ಲಿಸದೇ ಶಿಕ್ಷಣ ಮಂದುವರೆಸಿ ಬದುಕಿನಲ್ಲಿ ಉತ್ತಮ ವ್ಯಕ್ತಿಗಳಾಗಿ ಬೆಳೆಯಿರಿ ಎಂದರು.
ಕಾರ್ಯಕ್ರಮದಲ್ಲಿ ಮಕ್ಕಳ ಸಹಾಯವಾಣಿಯಿಂದ ಮಕ್ಕಳಿಗೆ ಮೊಬ್ಯೆಲ್ ಬಳಕೆಯಿಂದ ಆಗುವ ದುಷ್ಪಾರಿಣಮಗಳ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕಿ ಪವಿತ್ರ ಮತ್ತು ಸಿಬ್ಬಂದಿ ವರ್ಗ ಮತ್ತು ಬದುಕು ಮಕ್ಕಳ ಸಹಾಯವಾಣಿ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
