ಚಿತ್ರದುರ್ಗ:
ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿರಬೇಕಾದರೆ ಕ್ರೀಡೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ಎಸ್.ಜೆ.ಎಂ.ವಿದ್ಯಾಪೀಠದ ಕಾರ್ಯನಿರ್ವಾಹಕ ನಿರ್ದೇಶಕ ಜಿ.ಎನ್.ಮಲ್ಲಿಕಾರ್ಜುನಪ್ಪ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮಠದಕುರುಬರಹಟ್ಟಿಯಲ್ಲಿರುವ ಎಸ್.ಜೆ.ಎಂ.ಶಾಲೆಯಲ್ಲಿ ಗುರುವಾರದಿಂದ ಮೂರು ದಿನಗಳ ಕಾಲ ನಡೆಯುವ ಪ್ರೌಢಶಾಲಾ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಕ್ರೀಡಾಪಟುಗಳಿಂದ ವಂದನೆ ಸ್ವೀಕರಿಸಿ ಮಾತನಾಡಿದರು.ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ ಮಕ್ಕಳಿಗೆ ಅತ್ಯವಶ್ಯಕವಾಗಿ ಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ .ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಿ ಸೋತವರು ಕುಗ್ಗದೆ ಮುಂದೆ ಗೆಲುವಿಗೆ ಪ್ರಯತ್ನಿಸಿ ಎಂದು ತಿಳಿಸಿದರು.
ಎಸ್.ಜೆ.ಎಂ.ಶಾಲೆಗಳ ಪ್ರಾಂಶುಪಾಲರಾದ ಪರಂಜ್ಯೋತಿ, ಉಪಪ್ರಾಂಶುಪಾಲರಾದ ಗಾಯತ್ರಿ, ಶಿಕ್ಷಕಿಯರಾದ ಸೈಯದ್ ಅಫ್ಸಾ ತಬ್ಸಂ, ಪುಷ್ಪವಲ್ಲಿ, ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ವಿಶೇಷಾಧಿಕಾರಿ ಕೃಷ್ಣಮೂರ್ತಿ ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
