ಹೊನ್ನಾಳಿ:
ನೀರು ಸಾಗಾಟದ ಟ್ರ್ಯಾಕ್ಟರ್ ಟ್ಯಾಂಕರ್ ಆಯ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಮತ್ತು ಇಬ್ಬರು ಸಹಾಯಕರು ಗಾಯಗೊಂಡಿರುವ ದುರ್ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ. ದುರ್ಘಟನಾ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಆಗಮಿಸುತ್ತಿದ್ದ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಕಂದಾಯ ಇಲಾಖೆಯ ಚುನಾವಣಾ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.
ಮಂಗಳವಾರ ನಡೆದ ಮತದಾನದ ಬಳಿಕ ವಿದ್ಯುನ್ಮಾನ ಮತಯಂತ್ರಗಳನ್ನು ದಾವಣಗೆರೆ ವಿಶ್ವವಿದ್ಯಾನಿಲಯದ ಸ್ಟ್ರಾಂಗ್ ರೂಮ್‍ಗೆ ತಲುಪಿಸಿ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕುಗಳ ಕಂದಾಯ ಇಲಾಖೆಯ ಚುನಾವಣಾ ಸಿಬ್ಬಂದಿ ಪಟ್ಟಣಕ್ಕೆ ವಾಪಸಾಗುತ್ತಿದ್ದರು.
ಗಾಯಾಳುಗಳನ್ನು ಹೊನ್ನಾಳಿಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನಾಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








