ಬೆಂಗಳೂರು:
ಇತ್ತೀಚೆಗಷ್ಟೇ ವೇತನ ಅನುದಾನಕ್ಕೆ ಒಳಪಟ್ಟಿರುವ ರಾಜ್ಯದ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಹಿಂದಿನ ಸೇವಾವಧಿಯನ್ನು ಪರಿಗಣಿಸಿ ವೇತನ ನಿಗದಿಗೊಳಿಸುವ ಕುರಿತ ಬಸವರಾಜು ಹೊರಟ್ಟಿ ಸಮಿತಿಯ ವರದಿ ಜಾರಿ ಹಾಗೂ ನಿಶ್ಚಿತ ಪಿಂಚಣಿಗೆ ಒತ್ತಾಯಿಸಿ ಈ ಸಂಸ್ಥೆಗಳ ನೌಕರರು ನಡೆಸುತ್ತಿರುವ ಧರಣ 5ನೇ ದಿನಕ್ಕೆ ಕಾಲಿಟ್ಟಿದೆ.
ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ಅಧ್ಯಕ್ಷ ಜಿ.ಹಂನುಮಂತಪ್ಪ ಮಾತನಾಡಿ, 2006ರ ಏಪ್ರಿಲ್‍ನಂತರ ಅನುದಾನಕ್ಕೆ ಒಳಪಟ್ಟು ವೇತನ ಪಡೆಯುತ್ತಿರುವ ಅನುದಾನಿತ ವಿದ್ಯಾಸಂಸ್ಥೆಗಳ 40 ಸಾವಿರಕ್ಕೂ ಹೆಚ್ಚು ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನೆ ಜಾರಿಯಾಗಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಸಂಘದ ಪದಾಧಿಕಾರಿಗಳು, ಶಿಕ್ಷಕರು, ನೌಕರರು ಪಾಲ್ಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
