ಸಿರುಗುಪ್ಪ:
ಅಭಿವೃದ್ಧಿ ಶೀಲ ದೇಶಗಳಲ್ಲಿ ಬಡತನ, ಅನಕ್ಷರತೆ ಬಹುದೊಡ್ಡ ಸಮಸ್ಯೆಯಾಗಿದ್ದು, ಅನಕ್ಷರತೆಯಿಂದಾಗಿ ಅನೇಕ ಜ್ವಲಂತ ಸಮಸ್ಯೆಗಳು ಇಂದಿಗೂ ಜೀವಂತವಾಗಿ ಉಳಿದುಕೊಂಡು ಬಂದಿದ್ದು, ವಿದ್ಯಾರ್ಥಿಗಳು ತಾವು ಪಡೆದ ಶಿಕ್ಷಣವನ್ನು ಸಮಾಜದ ಹಿಂದುಳಿದ ಕಟ್ಟಕಡೆಯ ವ್ಯಕ್ತಿಗೂ ಅಕ್ಷರಬ್ಯಾಸವನ್ನು ಕಲಿಸುವ ಮೂಲಕ ದೇಶವನ್ನು ಸಾಕ್ಷರತಾ ದೇಶವನ್ನಾಗಿ ರೂಪಿಸುವ ಜವಾಬ್ದಾರಿ ಪ್ರತಿಯೊಬ್ಬ ಯುವಕರದ್ದಾಗಿದೆ ಎಂದು ನಿವೃತ್ತ ಉಪನ್ಯಾಸಕ ಶಿವಕುಮಾರ ಬಳಿಗಾರ್ ಕರೆ ನೀಡಿದರು.
ತಾಲೂಕಿನ ಹೆರಕಲ್ ಗ್ರಾಮದ ಮರಿಶಿವಯೋಗಿಗಳ ಮಠದ ಆವರಣದಲ್ಲಿನ ಸಭಾಂಗಣದಲ್ಲಿ ಬಸವೇಶ್ವರ ಪದವಿ ಮಹಾವಿದ್ಯಾಲಯ ವತಿಯಿಂದ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು
ಸಂಸ್ಥೆಯ ಅಧ್ಯಕ್ಷ ಯು.ಹನುಮಂತಪ್ಪ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ದೆಸೆಯಲ್ಲಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವ ಮೂಲಕ ಗ್ರಾಮ ಭಾರತದ ಉದ್ದಾರಕ್ಕಾಗಿ ಶ್ರಮಿಸಬೇಕು, ಎನ್.ಎಸ್.ಎಸ್.ಶಿಬಿರದ ಮೂಲಕ ವಿದ್ಯಾರ್ಥಿಗಳು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಪ್ರಚಾರ್ಯ ಜಡೆಪ್ಪ ಹಾಗೂ ಶಿಬಿರಾರ್ಥಿಗಳು, ಉಪನ್ಯಾಸಕರು ಇದ್ದರು.