ಯಾದಗಿರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೇಂದ್ರದ ಹೆಜ್ಜೆ

ಯಾದಗಿರಿ:

    ರಾಜ್ಯದ ಯಾದಗಿರಿ, ರಾಯಚೂರು ಜಿಲ್ಲೆಗಳನ್ನು ಹಿಂದುಳಿದ ಜಿಲ್ಲೆಗಳೆಂದು ಕೇಂದ್ರ ಸರ್ಕಾರ ಈಗಾಗಲೇ ಗುರುತಿಸಿದ್ದು, ಯಾದಗಿರಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುಂದಾಗಿದೆ ಎಂದು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಖಾತೆ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

    ಯಾದಗಿರಿಯಲ್ಲಿಂದು ಕೇಂದ್ರ ಸರ್ಕಾರದ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿ, 2020ರ ವೇಳೆಗೆ ಜಿಲ್ಲೆಗೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು, ರಾಯಚೂರು ಹಾಗೂ ಯಾದಗಿರಿ ಎರಡೂ ಜಿಲ್ಲೆಗಳಲ್ಲಿ ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ, ಜಿಲ್ಲಾಡಳಿತದಿಂದ ವಿಶೇಷವಾಗಿ ಪ್ರತಿ ತಿಂಗಳು ಅಭಿವೃದ್ಧಿಯ ಸಮೀಕ್ಷೆ ನಡೆಯುತ್ತಿದೆ ಎಂದು ಹೇಳಿದರು.

     ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯ ಎರಡು ಜಿಲ್ಲೆಗಳು ಅಭಿವೃದ್ಧಿ ಪಡಿಸಲಾಗುತ್ತಿದೆ. ಹಂತ ಹಂತವಾಗಿ ಜಿಲ್ಲೆ ಅಭಿವೃದ್ಧಿ ಆಗುತ್ತಿದೆ, ಬೇರೆ ಬೇರೆ ಕಡೆಯಿಂದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಆರೋಗ್ಯ ವಲಯಕ್ಕೆ ಸಿಬ್ಬಂದಿಗಳ ಕೊರತೆ ಕಂಡು ಬಂದಿದೆ, ಅದನ್ನು ನೀಗಿಸುವಲ್ಲಿ ಪ್ರಯತ್ನ ನಡೆಯುತ್ತಿದೆ ಎಂದರು.

      ಮುಂದಿನ 5-6 ತಿಂಗಳಲ್ಲಿ ಆನೆಕಾಲು ರೋಗ, ಅಥವಾ ಇನ್ನಿತರೆ ಆರೋಗ್ಯ ಸಮಸ್ಯೆಗಳನ್ನು ನಿವಾರಣೆಗೆ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಆಯುಷ್ಮಾನ್ ಭಾರತ ಯೋಜನೆ ಜನರಿಗೆ ತಲುಪಿಸುವ ಗುರಿ ಹೊಂದಲಾಗಿದೆ. ಶಿಕ್ಷಣ ವ್ಯವಸ್ಥೆಯಲ್ಲಿ ಗುಣಮಟ್ಟ ಹೆಚ್ಚಿಸಲು ಒತ್ತು ನೀಡಲಾಗಿದೆ. ಯಾದಗಿರಿಯಲ್ಲಿ 50 ಪ್ರತಿಶತ ಶಿಕ್ಷಕರ ಕೊರತೆ ಇದೆ, ಇದನ್ನು ಕೇಂದ್ರ ಮತ್ತು ರಾಜ್ಯ ಸರಕಾರ ಎರಡು ಸೇರಿ ಅಭಿವೃದ್ಧಿ ಮಾಡಲಿದೆ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link