ಕೆಪಿಎಸ್‍ಸಿ ನೇಮಕ ಪ್ರಕ್ರಿಯೆಗೆ ಮತ್ತೆ ಚಾಲನೆ

ಬೆಂಗಳೂರು

     ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಲೋಕಸೇವಾ ಆಯೋಗ ಸಿಹಿ ಸುದ್ದಿ ನೀಡಿದ್ದು ಕೆಪಿಎಸ್‍ಸಿ ನೇಮಕ ಪ್ರಕ್ರಿಯೆಗೆ ಮತ್ತೆ ಚಾಲನೆ ನೀಡಲು ಮುಂದಾಗಿದೆ.ಹಂಗಾಮಿ ಅಧ್ಯಕ್ಷರಾಗಿದ್ದ ಷಡಕ್ಷರಿ ಸ್ವಾಮಿ ಲೋಕಸೇವಾ ಆಯೋಗಕ್ಕೆ ಅಧ್ಯಕ್ಷರಾಗಿ ನೇಮಕಗೊಳ್ಳುತ್ತಿದ್ದಂತೆ ಬಾಕಿ ಉಳಿದಿದ್ದ ನೇಮಕ ಪ್ರಕ್ರಿಯೆಗಳಿಗೆ ಚಾಲನೆ ನೀಡಲು ಸಿದ್ಧತೆ ಆರಂಭಿಸಿದ್ದಾರೆ.

    ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಗೆಜೆಟೆಡ್  ಅಧಿಕಾರಿಗಳ ಹುದ್ದೆ, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕ, ಶೀಘ್ರ ಲಿಪಿಕಾರರು ಸೇರಿದಂತೆ ಹಲವು ಹುದ್ದೆಗಳ ನೇಮಕ ಪ್ರಕ್ರಿಯೆಗೆ ಚಾಲನೆ ಸಿಗಲಿದೆ ಎಂದು ಕೆಪಿಎಸ್‍ಸಿ ಮೂಲಗಳು ತಿಳಿಸಿವೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 398 ಶೀಘ್ರಲಿಪಿಕಾರರು, ಗೆಜೆಟೆಡ್ ಪ್ರೊಬೆಷನರಿ ಅಧಿಕಾರಿಗಳ ಹುದ್ದೆಗಳು (ಗ್ರೂಪ್ ಎ -97, ಗ್ರೂಪ್ ಬಿ- 716) 798 ಪ್ರಥಮ ದರ್ಜೆ ಸಹಾಯಕರು, 441 ದ್ವಿತೀಯ ದರ್ಜೆ ಸಹಾಯಕರು, 443 ಬೆರಳಚ್ಚುಗಾರರು, ಹುದ್ದೆಗಳು ಸೇರಿದಂತೆ ನೂರಾರು ಹುದ್ದೆಗಳ ನೇಮಕ ಪ್ರಕ್ರಿಯೆಗೆ ಸದ್ಯದಲ್ಲಿಯೇ ಚಾಲನೆ ಸಿಗಲಿದೆ ಎಂದು ಕೆಪಿಎಸ್‍ಸಿ ಉನ್ನತ ಮೂಲಗಳು ತಿಳಿಸಿವೆ. ವಿವಿಧ ವಿಷಯಗಳಲ್ಲಿ ಪದವಿ ಪಡೆದ ಲಕ್ಷಾಂತರ ಯುವಕರು ಉದ್ಯೋಗವಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಈ ಸಂದರ್ಭದಲ್ಲಿ ಉದ್ಯೋಗದ ಭರವಸೆಯ ಸಿಹಿ ಸುದ್ದಿ ಹೊರ ಬಂದಿರುವುದು ಸಂತಸಕ್ಕೆ ಕಾರಣವಾಗಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap