ಬೆಂಗಳೂರು
ನಿರ್ಮಾಣ ಹಂತದ ಕಟ್ಟಡದಲ್ಲಿ ಪೇಂಟಿಂಗ್ ಮಾಡುವ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗಾಯಗೊಂಡಿರುವ ಉತ್ತರ ಭಾರತ ಮೂಲದ ಶೈಲೇಶ್ (25) ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಂಧ್ರಪ್ರದೇಶ ಮೂಲದ ವಿಜಯಕುಮಾರ್ ಕೊಡಿಗೇಹಳ್ಳಿ ಮುಖ್ಯರಸ್ತೆಯ ಮುನೇಶ್ವರ ನಗರದಲ್ಲಿ ಹೈಟೆನ್ಷನ್ ತಂತಿಯ ಬಳಿ ಕಟ್ಟಡ ನಿರ್ಮಾಣ ಮಾಡಿದ್ದು,ಕಟ್ಟಡ ಕಾಮಗಾರಿ ಮುಗಿದು ಪೇಂಟಿಂಗ್ ಕಾರ್ಯ ನಡೆಯುತ್ತಿರುವಾಗ ಈ ಅವಘಡ ಸಂಭವಿಸಿದೆ.
ಬಣ್ಣ ಬಳಿಯುತ್ತಿದ್ದಾಗ ಶೈಲೇಶ್ ಆಯತಪ್ಪಿ ರೋಲರ್ ಬಿಳುವುದನ್ನು ಹಿಡಿಯಲು ಹೋದಾಗ ಹತ್ತಿರದಲ್ಲಿದ್ದ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಮನೆಗೂ ವಿದ್ಯುತ್ ಪ್ರವಹಿಸಿ ಟಿವಿ, ಸ್ವಿಚ್ ಬೋರ್ಡ್ ಸೇರಿದಂತೆ ವೈರ್‍ಗಳು ಸುಟ್ಟು ಹೋಗಿವೆ.
ಕೆಳಗೆಬಿದ್ದ ಶೈಲೇಶ್ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಈ ಸಂಬಂಧ ಪ್ರಕರಣ ದಾಖಲಿಸಿರುವ ಕೆಆರ್‍ಪುರಂ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
