ಬಳ್ಳಾರಿ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜಾನಪದ ಸಂಗೀತ ಕಾರ್ಯಕ್ರಮದ ಮೂಲಕ ಸರಕಾರದ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆಯಲ್ಲಿ ಶನಿವಾರ ಚಾಲನೆ ನೀಡಲಾಯಿತು.
ಗುಡೇಕೋಟೆ ಗ್ರಾಪಂ ಪಿಡಿಒ ಸಿದ್ದಲಿಂಗಪ್ಪ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಉಮಾವತಿ, ಸದಸ್ಯರಾದ ನಿಂಗಪ್ಪ, ಗ್ರಾಪಂ ಸಿಬ್ಬಂದಿ ಹಾಗೂ ಅಕ್ಷಯ ಕಲಾ ಟ್ರಸ್ಟ್ ಕಲಾವಿದರು ಇದ್ದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಾಯೋಜಿತ ಅಕ್ಷಯ ಕಲಾಟ್ರಸ್ಟ್‍ನ ಕಲಾವಿದರು ಕೂಡ್ಲಿಗಿ ತಾಲೂಕಿನ ವಿವಿಧ ಹಳ್ಳಿಗಳಲ್ಲಿ 10 ದಿನಗಳ ಕಾಲ ಸಂಚರಿಸಿ ಕೃಷಿ ಸಾಲಮನ್ನಾ,ಇಸ್ರೆಲ್ ಕೃಷಿಗೆ ಒತ್ತು, ಸಮಾಜಕಲ್ಯಾಣ ಇಲಾಖೆಯ ಸಹಾಯವಾಣಿ, ಕಾರ್ಮಿಕ ಇಲಾಖೆಯ ಕಾರ್ಯಕ್ರಮಗಳು, ರೈತರ ಸಬಲೀಕರಣ ಕಾರ್ಯಕ್ರಮಗಳು, ಅನ್ನಭಾಗ್ಯ ಸೇರಿದಂತೆ ವಿವಿಧ ಯೋಜನೆಗಳ ಕುರಿತು ಜಾನಪದ ಸಂಗೀತದ ಹಾಡುಗಳ ಮೂಲಕ ಅರಿವು ಮೂಡಿಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ