ಸರ್ವಪಲ್ಲಿ ರಾಧಾಕೃಷ್ಣನ್ ಅವರ ಮೊಮ್ಮಗ ಬಿಜೆಪಿಗೆ ಸೇರ್ಪಡೆ

ಬೆಂಗಳೂರು

        ಮಾಜಿ ರಾಷ್ಟ್ರಪತಿ, ದಿ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಮೊಮ್ಮಗ ಸುಬ್ರಹ್ಮಣ್ಯಂ ಶರ್ಮಾ ಗೌರವರಂ ಬಿಜೆಪಿ ಸೇರ್ಪಡೆಗೊಂಡರು.

ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥಭವನದಲ್ಲಿಂದು ನಡೆದ ಪಕ್ಷ ಸೇರ್ಪೆ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅನುಪಸ್ಥಿತಿಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮೇಲ್ಮನೆ ಸದಸ್ಯ ರವಿಕುಮಾರ್, ಸುಬ್ರಹ್ಮಣ್ಯಂ ಶರ್ಮಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.

ಚೆನ್ನೈನಲ್ಲಿ ವಾಸವಿದ್ದ ಸುಬ್ರಹ್ಮಣ್ಯಂ ಅವರು 2006 ರಲ್ಲಿ ಬೆಂಗಳೂರಿಗೆ ಬಂದು ಇಲ್ಲಿಯೇ ನೆಲೆಸಿದ್ದಾರೆ. 2018 ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದರು.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link