ಕೇಂದ್ರ ಸರ್ಕಾರದ ಜೊತೆ ರಾಜ್ಯ ಸರ್ಕಾರದ ಸಮನ್ವಯ ಅಗತ್ಯ: ಸದಾನಂದ ಗೌಡ

ಬೆಂಗಳೂರು

       ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿಪಡಿಸಲು ರಾಜಕೀಯ ಇಚ್ಛಾಶಕ್ತಿಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸದಾನಂದ ಗೌಡ ಅವರು ಪ್ರತಿಪಾದಿಸಿದ್ದಾರೆ

       ದೇಶದಲ್ಲಿ ಕೇಂದ್ರ-ರಾಜ್ಯದ ಸಂಬಂಧ ಇರಲೇಬೇಕಾಗುತ್ತದೆ. ಸಂಸದರು ಮತ್ತು ಶಾಸಕರು ನಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕುರಿತಂತೆ ಸಮಾನ ಆಲೋಚನೆಯಲ್ಲಿ ಸಾಗಬೇಕಾಗುತ್ತದೆ ಎಂದು ಹೇಳಿದರು.

       ನಂದಿನಿ ಬಡಾವಣೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಅವರು ತಾವು ಕೇಂದ್ರ ಸಚಿವರಾಗಿದ್ದು, ರಾಜ್ಯದಿಂದ ಕೇಂದ್ರದ ನೆರವು ಕೋರಿ ಯಾರೇ ಬಂದರೂ ಸಂಬಂಧಪಟ್ಟವರ ಜೊತೆ ಚರ್ಚೆ ನಡೆಸಿ ಪ್ರಾಮಾಣಿಕ ಪ್ರಯತ್ನ ನಡೆಸಿ ಅವರ ನೆರವಿಗೆ ಬಂದಿದ್ದೇನೆ. ಚುನಾವಣಾ ವೇಳೆ ನಾವು ವೈರಿಗಳಾಗಿರಬೇಕು. ಆದರೆ, ಅಭಿವೃದ್ಧಿ ವಿಚಾರದಲ್ಲಿ ಅಲ್ಲ ಎಂದು ಹೇಳಿದರು.

      2020ರ ವೇಳೆಗೆ ಪ್ರತಿಯೊಬ್ಬರು ಸೂರು ಹೊಂದಬೇಕು ಎಂಬುದು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ. ಇದಕ್ಕಾಗಿ ರಾಜ್ಯಸರ್ಕಾರದ ಸಹಕಾರವು ಅಗತ್ಯವಿದೆ ಕೇಂದ್ರದಿಂದ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದನ್ನು ರಾಜ್ಯಸರ್ಕಾರ ಜಾರಿಗೊಳಿಸುವಲ್ಲಿ ಮುಂದಾಗಬೇಕು ಎಂದು ಹೇಳಿದರು.

       ಸ್ಥಳೀಯ ಶಾಸಕ ಗೋಪಾಲಯ್ಯ ಅವರು ಪ್ರಾಸ್ತಾವಿಕ ಭಾಷಣ ಮಾಡಿ, ಡಾ. ರಾಜ್‍ಕುಮಾರ್ ಮಲ್ಟಿ ಸ್ಪಷಾಲಿಟಿ ಆಸ್ಪತ್ರೆ, ನಂದಿನಿ ಲೇಔಟ್ ಈಜುಕೊಳಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಸ್ಟೇಡಿಯಂ, ಬಿಬಿಎಂಪಿ ಕಾಂಪ್ಲೆಕ್ಸ್ ನಿರ್ಮಾಣ ಹಂತದಲ್ಲಿದ್ದು, ಆದಷ್ಟು ಬೇಗ ಸಾರ್ವಜನಿಕರಿಗೆ ಸಮರ್ಪಿಸಲಾಗುವುದು ಎಂದು ತಿಳಿಸಿದರು.ಸಮಾರಂಭದಲ್ಲಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ, ಸ್ಥಳೀಯ ಬಿಬಿಎಂಪಿ ಸದಸ್ಯ ರಾಜೇಂದ್ರಕುಮಾರ್, ಮಾಜಿ ಉಪಮೇಯರ್ ಎಸ್. ಹರೀಶ್, ಮತ್ತಿತರರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap