ದಾವಣಗೆರೆ:
ಕರ್ನಾಟಕ ರಾಜ್ಯ ಬಾಡಿ ಲಿಫ್ಟಿಂಗ್ ಮತ್ತು ಸ್ಟ್ರೆಂಥ್ ಲಿಫ್ಟಿಂಗ್ ಅಸೋಸಿಯೇಷನ್ ಹಾಗೂ ಶ್ರೀಬೀರೇಶ್ವರ ವ್ಯಾಯಾಮ ಶಾಲೆ ಸಂಯುಕ್ತಾಶ್ರಯದಲ್ಲಿ ಡಿ.8 ಮತ್ತು 9ರಂದು ನಗರದಲ್ಲಿ ರಾಜ್ಯ ಮಟ್ಟದ ಬಾಡಿ ಲಿಫ್ಟಿಂಗ್ ಮತ್ತು ಸ್ಟ್ರೆಂಥ್ ಲಿಫ್ಟಿಂಗ್ ಚಾಂಪಿಯನ್‍ಶಿಫ್ ಸ್ಪರ್ಧೆ ಏರ್ಪಡಿಸಲಾಗಿದೆ.
ಈ ಕುರಿತು ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್‍ನ ಗುರುಸ್ವಾಮಿ, ಡಿ.8ರಂದು ನಗರದ ಶ್ರೀಬೀರೇಶ್ವರ ವ್ಯಾಯಾಮ ಶಾಲೆ ಆವರಣದಲ್ಲಿ ನಡೆಯುವ ಸ್ಪರ್ಧೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಕೆ.ಮಲ್ಲಪ್ಪ ವಹಿಸುವರು. ಪಾಲಿಕೆ ಮೇಯರ್ ಶೋಭಾ ಪಲ್ಲಾಗಟ್ಟೆ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಪಾಲಿಕೆ ಸದಸ್ಯ ದಿನೇಶ್ ಕೆ. ಶೆಟ್ಟಿ, ಕಾಂಗ್ರೆಸ್ ಮುಖಂಡ ಆರ್.ಎಸ್. ಶೇಖರಪ್ಪ, ನಗರಸಭಾ ಮಾಜಿ ಅಧ್ಯಕ್ಷ ಬಿ.ವೀರಣ್ಣ, ಮಾಜಿ ಸದಸ್ಯ ಜೆ.ಕೆ.ಕೊಟ್ರಬಸಪ್ಪ, ಕ್ರೀಡಾ ಪ್ರೋತ್ಸಾಹಕ ಮಹಾದೇವ್ ಗಾಂಧಿ ಭಾಗವಹಿಸುವರು ಎಂದು ಹೇಳಿದರು.
ಡಿ.9ರಂದು ಸಂಜೆ 6.30ಕ್ಕೆ ನಡೆಯುವ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಜಗಳೂರು ಶಾಸಕ ಎಸ್.ವಿ.ರಾಮಚಂದ್ರ ವಹಿಸುವರು. ಹರಿಹರ ಶಾಸಕ ಎಸ್.ರಾಮಪ್ಪ ಬಹುಮಾನ ವಿತರಣೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ. ಅಧ್ಯಕ್ಷೆ ಕೆ.ಆರ್.ಜಯಶೀಲಾ, ಬಿಜೆಪಿ ಮುಖಂಡ ಹೆಚ್.ಎಸ್.ನಾಗರಾಜ್, ಯುವ ಮುಖಂಡ ಬಿ.ಜೆ.ಅಜಯಕುಮಾರ್, ಉದ್ಯಮಿ ಬಿ.ಶಂಭುಲಿಂಗಪ್ಪ, ವರ್ತಕ ಬಳ್ಳಾರಿ ಷಣ್ಮುಖಪ್ಪ ಭಾಗವಹಿಸಲಿದ್ದಾರೆ ಎಂದರು.
ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಾಳುಗಳಿಗೆ 200 ರೂ. ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ. ಹೊರ ಜಿಲ್ಲೆಗಳಿಂದ ಬರುವ ಕ್ರೀಡಾಪಟುಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಮಾಡಲಾಗಿದೆ. ಸುಮಾರು 200 ಜನ ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ಈ ಸ್ಪರ್ಧೆಯಲ್ಲಿ ವಿಜೇತರಾದವರನ್ನು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಮಾಡಲಾಗವುದು ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್‍ನ ಕೆ.ಧರ್ಮರಾಜ್, ಜೆ.ಹೆಚ್.ನಾಗರಾಜ್, ಗೋಪಾಲ್.ಜಿ, ದಾದಾಪೀರ್, ಶಿವಾನಂದ್.ಜೆ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ