ವಿಧಾನ ಸಭೆ ಅಧಿವೇಷನ : ಕೊರೋನಾ ಮಾರ್ಗಸೂಚಿ ಪಾಲನೆಗೆ ಒತ್ತು : ಮಾಧುಸ್ವಾಮಿ

ಬೆಂಗಳೂರು

    ಮುಂಗಾರು ಅಧಿವೇಶನವನ್ನು ಬೆಂಗಳೂರಿನ ವಿಧಾನಸೌಧದಲ್ಲೇ ನಡೆಸಲು ಸ್ಪೀಕರ್ ತೀರ್ಮಾನಿಸಿದ್ದಾರೆ. ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ ಅಧಿವೇಶನ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

    ವಿಧಾನಸೌಧದಲ್ಲಿಂದು ಸಭಾಧ್ಯಕ್ಷರು, ಕಾರ್ಯದರ್ಶಿಗಳ ಜೊತೆ ಸದನವನ್ನು ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ವಿಧಾನಸೌಧದಲ್ಲೇ ಮಳೆಗಾಲದ ಅಧಿವೇಶನ ಮಾಡಲು ತೀರ್ಮಾನ ಮಾಡಲಾಗಿದೆ. ಇದಕ್ಕೆ ಸ್ಪೀಕರ್ ಕೂಡ ಸಮ್ಮತಿ ನೀಡಿದ್ದಾರೆ. ಸದಸ್ಯರು ಕುಳಿತುಕೊಳ್ಳುವ ಆಸನಗಳ ಮಧ್ಯೆ ಪರದೆ ಹಾಕಲಾಗುತ್ತದೆ. ಈ ಬಾರಿ ಅಧಿವೇಶನ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ನೀಡದಿರಲು ನಿರ್ಧರಿಸಲಾಗಿದೆ ಎಂದು ಹೇಳಿದರು.

    ಅಧಿವೇಶನ ಪ್ರವೇಶಕ್ಕೆ ಸಾರ್ವಜನಿಕರಿಗೆ ಪಾಸ್ ನೀಡುವುದಿಲ್ಲ. ಪತ್ರಕರ್ತರಿಗೂ ಎರಡು ಗ್ಯಾಲರಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಪ್ರತೀ ಸದಸ್ಯರಿಗೂ ಫೇಸ್ ಶೀಲ್ಡ್, ಮಾಸ್ಕ್ ನೀಡಲಾಗುವುದು. ಹಿರಿಯ ಅಧಿಕಾರಿಗಳು ಮತ್ತು ಪ್ರಧಾನ ಕಾರ್ಯದರ್ಶಿಯಂತಹ ಅಧಿಕಾರಿಗಳಿಗೆ ಮಾತ್ರ ಪ್ರವೇಶ ಇರಲಿದೆ. ಇಲಾಖೆಗೆ ಒಬ್ಬ ಅಧಿಕಾರಿ ಮಾತ್ರ ಸದನಕ್ಕೆ ಬರಲು ಅವಕಾಶ ನೀಡಲಾಗಿದೆ ಎಂದರು.

    ಸಚಿವರ ಜೊತೆ ಅವರ ಒಬ್ಬರ ಆಪ್ತ ಸಹಾಯಕನಿಗೆ ಮಾತ್ರ ಪ್ರವೇಶ ಇರಲಿದೆ. 70 ವರ್ಷ ಮೇಲ್ಪಟ್ಟವರಿಗೆ ವಿನಾಯಿತಿ ನೀಡುವ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಧುಸ್ವಾಮಿ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link