ಬೆಂಗಳೂರು :
ಕೊರೋನಾ ಸಂಕಷ್ಟದ ಭೀತಿಯ ನಡುವೆಯೂ ಈ ವರ್ಷ ನಮ್ಮ ಮಕ್ಕಳು ಶಾಲೆಗೆ ಹೋಗದೇ ಇದ್ದರೂ ಪರವಾಗಿಲ್ಲ. ಕೊರೋನಾ ರೋಗಕ್ಕೆ ತುತ್ತಾಗಿ ಮಕ್ಕಳು ತೊಂದರೆ ಅನುಭವಿಸೋದು ಬೇಡ. ಸದ್ಯಕ್ಕೆ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭವಾಗೋದು ಬೇಡ ಅಂತ ಅನೇಕ ಪೋಷಕರು, ಶಿಕ್ಷಣ ತಜ್ಞರ ಅಭಿಪ್ರಾಯವಾಗಿದೆ. ಆದ್ರೇ.. ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಮಾತ್ರ, ಶಾಲೆ ಓಪನ್ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಿ ಎಂಬುದಾಗಿ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ ಎನ್ನಲಾಗಿದೆ.
ಈ ಕುರಿತಂತೆ ರಾಜ್ಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಅಧ್ಯಕ್ಷ ಆಯಂಟನಿ ಸೆಬಾಸ್ಟಿಯನ್ ಅವರು, ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ವರದಿಯನ್ನು ಕಳುಹಿಸಿದ್ದು, ರಾಜ್ಯದಲ್ಲಿ ಶಾಲೆ ಓಪನ್ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುವಂತೆ ತಿಳಿಸಿದ್ದಾರೆ ಎನ್ನಲಾಗಿದೆ. ಈ ಮೂಲಕ ರಾಜ್ಯದಲ್ಲಿ ಸರ್ಕಾರದ ಅಂಗ ಸಂಸ್ಥೆಯಿಂದಲೇ ಶಾಲೆ ಆರಂಭಕ್ಕೆ ಮಕ್ಕಳ ಆಯೋಗ ಶಿಫಾರಸ್ಸು ಮಾಡಿರುವುದು ತಿಳಿದು ಬಂದಿದೆ. ಹೀಗಾಗಿ ರಾಜ್ಯ ಸರ್ಕಾರ ಶಾಲೆಗಳ ಆರಂಭದ ಬಗ್ಗೆ ಯಾವ ತೀರ್ಮಾನ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ