ಬೆಂಗಳೂರು
ರಾಜ್ಯ ಸರ್ಕಾರ ಸೂಚನೆ ಕೊಟ್ಟಿರುವ ಆದೇಶ ಇನ್ನೂ ಕೈ ತಲುಪದ ಹಿನ್ನಲೆಯಲ್ಲಿ ನಗರ ಸಂಚಾರ ಪೊಲೀಸರು ಸಂಚಾರ ನಿಯಮ ಉಲ್ಲಂಘಿಸಿದ ಚಾಲಕರು ಹಾಗೂ ಸವಾರರಿಗೆ ಕೇಂದ್ರದ ಪರಿಷ್ಕøತ ದುಬಾರಿ ದಂಡವನ್ನೇ ವಿಧಿಸುತ್ತಿದ್ದಾರೆ.ದುಬಾರಿ ದಂಡ ವಿಧಿಸುವುದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದರಿಂದ ರಾಜ್ಯ ಸರ್ಕಾರವು ಹೊಸ ಸಂಚಾರ ಉಲ್ಲಂಘನೆಯ ದಂಡದ ಮೊತ್ತವನ್ನು ಕಡಿಮೆ ಮಾಡಲು ಮುಂದಾಗಿ ಹಳೆಯ ದಂಡವನ್ನು ತೆಗೆದುಕೊಳ್ಳಬೇಕು ಎಂದು ಸಂಚಾರ ಪೊಲೀಸರಿಗೆ ಮೌಖಿಕ ಆದೇಶ ನೀಡಿದೆ.ಆದರೆ ಈ ಆದೇಶವು ಪೊಲೀಸರಿಗೆ ಇನ್ನೂ ಕೂಡ ತಲುಪಿಲ್ಲದಿರುವುದರಿಂದ ದಂಡದ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಪೊಲೀಸರು ಹೊಸ ದಂಡವನ್ನೇ ಪಡೆಯುತ್ತಿದ್ದಾರೆ.
ಸಂಚಾರ ನಿಯಮ ಉಲ್ಲಂಘಿಸಿದ ಚಾಲಕರು ಹಾಗೂ ಸವಾರರಿಂದ ಹೊಸ ದಂಡವನ್ನು ಪಡೆಯಬೇಡಿ ಎಂದು ಪೊಲೀಸರಿಗೆ ಸೂಚನೆ ನೀಡಿದ್ದೇವೆ. ಅಷ್ಟೇ ಅಲ್ಲದೆ ಈ ಹಿಂದೆ ಇದ್ದ ದಂಡದ ಮೊತ್ತವನ್ನು ಪಡೆಯಬೇಕು ತಿಳಿಸಲಾಗಿದೆ. ಕಾನೂನು ಇಲಾಖೆ ಜೊತೆಗೆ ಚರ್ಚೆ ನಡೆಸಿ ದಂಡ ಪರಿಷ್ಕರಣೆ ಮಾಡಲಾಗುತ್ತದೆ. ಈ ಸಂಬಂಧ ಬೇರೆ ಬೇರೆ ರಾಜ್ಯಗಳಿಂದ ವರದಿ ತರಿಸಿಕೊಳ್ಳುತ್ತಿದ್ದೇವೆ. ಗುಜರಾತ್‍ನಲ್ಲಿ ಶುಕ್ರವಾರ ಅಧಿಸೂಚನೆ ಹೊರಡಿಸಲಾಗಿದೆ. ಅದನ್ನು ಪಡೆದು ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಅವರು ತಿಳಿಸಿದ್ದರು.
ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ನಗರದಲ್ಲಿ ಸಂಚಾರ ಉಲ್ಲಂಘನೆಯ ದಂಡವನ್ನ ಕಡಿಮೆ ಮಾಡುವ ಪ್ರಸ್ತಾವನೆ ಬಂದಿಲ್ಲ. ಸರ್ಕಾರದ ಆದೇಶ ಬಂದ ಮೇಲೆ ಆದೇಶದಲ್ಲಿ ಏನಿರಲಿದೆ ಎನ್ನುವುದನ್ನು ನೋಡಿಕೊಂಡು ದಂಡ ವಿಧಿಸುವಲ್ಲಿ ಬದಲಾವಣೆ ಮಾಡುತ್ತೇವೆ. ಆದೇಶ ಬರುವವರೆಗೂ ದಂಡದಲ್ಲಿ ಯಾವುದೇ ಬದಲಾವಣೆ ಸದ್ಯಕ್ಕಿಲ್ಲ ಎನ್ನುತ್ತಾರೆ
ಸಾರಿಗೆ ಸಚಿವರು ಹೇಳಿಕೆ ಕೊಟ್ಟಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.ಸಂಚಾರದ ವೇಳೆ ಆಗುವ ಸಣ್ಣ ಪುಟ್ಟ ಉಲ್ಲಂಘನೆಗಳಿಗೆ ನೋಡಿ ದಂಡ ಪ್ರಯೋಗ ಮಾಡುವಂತೆ ಹೇಳಿದ್ದಾರೆ. ಅದನ್ನು ಮಾಡಲು ಸಂಚಾರ ಪೆÇಲೀಸರಿಗೆ ಸೂಚಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಸಂಚಾರ ಶಿಸ್ತು ಕಾಪಾಡಲು ದಂಡ ಇರುತ್ತದೆಯೇ ಹೊರತು ನಾವು ಮುಂದೆ ತಪ್ಪು ಮಾಡುತ್ತೇವೆ.
ನಮಗೆ ದಂಡ ಕಡಿಮೆ ಮಾಡಿ ಅಂತ ಹೇಳುವುದಕ್ಕಲ್ಲ. ಈಗ ಇರುವ ದಂಡವು ಸರಿಯಾಗಿದೆ.ರಸ್ತೆ ಅಪಘಾತದಿಂದಾಗಿ ಪ್ರತಿ ವರ್ಷ ದೇಶದಲ್ಲಿ 1.5 ಲಕ್ಷ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕರ್ನಾಟಕದಲ್ಲಿ ಪ್ರತಿ ದಿನ ಸುಮಾರು 35 ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿದ್ದಾರೆ ಎಂದು ತಿಳಿಸಿದರು.
ಹಳೆಯ ದಂಡ
ಹಳೆಯ ದಂಡದಲ್ಲಿ ರಸ್ತೆ ನಿಯಮ ಉಲ್ಲಂಘನೆಗೆ 100 ರೂ., ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಾಲನೆಗೆ 100 ರೂ, ಪರವಾನಿಗೆ ಇಲ್ಲದೆ ವಾಹನ ಚಾಲನೆಗೆ 1,000 ರೂ., ಡ್ರೈವಿಂಗ್ ಲೈಸೆನ್ಸ್ ಇಲ್ಲದಿದ್ದರೆ 500 ರೂ. ಹಾಗೂ ಅತಿವೇಗಕ್ಕೆ 400 ರೂ. ವಿಧಿಸಲಾಗುತ್ತಿತ್ತು. ಜೊತೆಗೆ ಮದ್ಯ ಸೇವಿಸಿ ವಾಹನ ಚಾಲನೆಗೆ 2,500 ರೂ., ವೇಗ ಮತ್ತು ರೇಸಿಂಗ್‍ಗೆ 500 ರೂ., ಸೀಟ್ ಬೆಲ್ಟ್ 100 ರೂ. ಹಾಗೂ ಇನ್ಸೂರೆನ್ಸ್ ಇಲ್ಲದಿದ್ದರೆ 1000 ರೂ. ದಂಡದ ಮೊತ್ತವಿತ್ತು.







