ಚಳ್ಳಕೆರೆ
ರಾಷ್ಟ್ರದ ಭವಿಷ್ಯದ ಪ್ರಧಾನ ಮಂತ್ರಿಯನ್ನಾಗಿ ಯುವ ನಾಯಕ ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡಬೇಕೆಂಬುವುದೇ ನಮ್ಮ ಕನಸಾಗಿದೆ. ಈ ಹಿನ್ನೆಲೆಯಲ್ಲಿ ನಗರದ 18ನೇ ವಾರ್ಡ್‍ನಿಂದಲೇ ಸಾವಿರಾರು ನೂರಾರು ಕಾರ್ಯಕರ್ತರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ಎಲ್ಲರೂ ಸ್ವಯಂ ಪ್ರೇರಣೆಯಿಂದಲೇ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆಂದು 18ನೇ ವಾರ್ಡ್‍ನ ನಗರಸಭಾ ಸದಸ್ಯ ಎಂ.ಜೆ.ರಾಘವೇಂದ್ರ ತಿಳಿಸಿದ್ದಾರೆ.
ಅವರು, ಭಾನುವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿಯವರ ಪರಿವರ್ತನಾಯಾತ್ರೆಗೆ ತೆರಳುವ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದರು. ಈ ಸಂದರ್ಭದಲ್ಲಿ ನೂರಾರು ಅಭಿಮಾನಿಗಳು ಸಹ ಇವರಿಗೆ ಧ್ವನಿಗೂಡಿಸಿದರು. ನಗರದ 18ನೇ ವಾರ್ಡ್‍ನಲ್ಲಿ ಸ್ವಯಂ ಪ್ರೇರಣೆಯಿಂದ ನೂರಾರು ಜನರು ರಾಹುಲ್ ಗಾಂಧಿಯವರ ಕಾರ್ಯಕ್ರಮಕ್ಕೆ ಹೊರಟು ನಿಂತಿದ್ದು, ನಗರಸಭಾ ಸದಸ್ಯ ಎಂ.ಜೆ.ರಾಘವೇಂದ್ರರವರ ಸಂತಸಕ್ಕೆ ಕಾರಣವಾಗಿದ್ದು, ನಗರದ ಎಲ್ಲಾ ವಾರ್ಡ್‍ಗಳಲ್ಲೂ ಇದೇ ರೀತಿ ಪಕ್ಷದ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸಮಾವೇಶಕ್ಕೆ ತೆರಳಿದ್ದು, ಪಕ್ಷದ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಜಯಕ್ಕೆ ಶಾಸಕರ ಟಿ.ರಘುಮೂರ್ತಿಯವರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆಂದರು.