ಚಿತ್ರದುರ್ಗ:
ಐ.ಯು.ಡಿ.ಪಿ.ರಸ್ತೆ ಆರನೆ ಕ್ರಾಸ್‍ನಿಂದ ಒಂದನೇ ಕ್ರಾಸ್‍ವರೆಗೆ ಒಂದು ಕೋಟಿ ರೂ.ವೆಚ್ಚದ ಕಾಂಕ್ರಿಟ್ ರಸ್ತೆ ಕಾಮಗಾರಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಂಗಳವಾರ ಚಾಲನೆ ನೀಡಿದರು.
ರಸ್ತೆ ಕಾಮಗಾರಿಗೆ ಪೂಜೆ ಸಲ್ಲಿಸಿ ನಂತರ ಮಾತನಾಡಿದ ಶಾಸಕರು 32 ನೇ ವಾರ್ಡ್ ಹಾಗೂ35 ನೇ ವಾರ್ಡ್ ಸರಸ್ವತಿಪುರಂನಿಂದ ಹಾಗೂ ಸರ್ವಿಸ್ ರಸ್ತೆಯಿಂದ ಬರುವವರಿಗೆ ಅನುಕೂಲವಾಗಲಿ ಎನ್ನುವ ಕಾರಣಕ್ಕಾಗಿ ಹತ್ತು ಇಂಚು ದಪ್ಪದ ಕಾಂಕ್ರಿಟ್ ಮತ್ತು ಡಿ.ಎಲ್.ಸಿ.ಬೇಸ್ ಹೈಕ್ವಾಲಿಟಿ ರಸ್ತೆ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು
ಹೆದ್ದಾರಿಯಲ್ಲಿ ದಿನದ 24 ಗಂಟೆಯೂ ಲಾರಿ, ಬಸ್ಸು ಸೇರಿದಂತೆ ನಾನಾ ಬಗೆಯ ವಾಹನಗಳು ಸಂಚರಿಸುವುದರಿಂದ ಅನೇಕ ಬಾರಿ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸಿದ್ದುಂಟು. ಅಪಘಾತಗಳನ್ನು ಕಡಿಮೆಗೊಳಿಸುವುದಕ್ಕಾಗಿ ಸರ್ವಿಸ್ ರಸ್ತೆಯಲ್ಲಿ ಕಾಂಕ್ರಿಟ್ ರಸ್ತೆ ನಿರ್ಮಿಸಲಾಗುತ್ತಿದೆ ಇನ್ನು ಹದಿನೈದು ದಿನ ಇಲ್ಲವೇ ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.
ಒಂದನೆ ಕ್ರಾಸ್‍ನಲ್ಲಿ ಮುಂದಿನ ವಾರ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿ ಆರಂಭಗೊಳ್ಳಲಿದೆ. ಈಗ ಆರಂಭವಾಗಿರುವ ರಸ್ತೆ ಕಾಮಗಾರಿ ಮುಗಿದ ಬಳಿಕ ಐ.ಯು.ಡಿ.ಪಿ., ಗಾಂಧಿನಗರ, ಸಾಧಿಕ್‍ನಗರ, ಜಗಜೀವನರಾಂ ನಗರದ ನಿವಾಸಿಗಳಿಗೆ ಹಾಗೂ ವಾಹನ ಸವಾರರಿಗೆ ಇದರಿಂದ ಸಂಚಾರದ ದಟ್ಟಣೆ ಕಡಿಮೆಯಾಗಲಿದೆ ಎಂದು ಶಾಸಕರು ತಿಳಿಸಿದರು.
ನಗರ ವ್ಯಾಪ್ತಿಯಲ್ಲಿ ಹದಗೆಟ್ಟಿರುವ ರಸ್ತೆಗಳನ್ನು ಹಂತಹಂತವಾಗಿ ಅಭಿವೃದ್ದಿ ಪಡಿಸಲಾಗುವುದು. ನಾಗರೀಕರಿಗೆ ಅಗತ್ಯವಾಗಿ ಬೇಕಾಗಿರುವ ಮೂಲಭೂತ ಸೌಲಬ್ಯಗಳನ್ನು ಕಲ್ಪಿಸಿಕೊಡಲಾಗುವುದು ಎಂದರು
ನಗರಸಭೆ ಸದಸ್ಯೆ ತಾರಕೇಶ್ವರಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಜನರು ಬಿಜೆಪಿಗೆ ಅಧಿಕಾರ ಕೊಟ್ಟಿದ್ದಾರೆ. ಜನರ ನಿರೀಕ್ಷೆಯಂತೆ ಸದಸ್ಯರು ಕೆಲಸ ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ತಾವು ಮುನ್ನಡೆಯುವುದಾಗಿ ಹೇಳಿದರು
ಸೇರಿದಂತೆ ಆ ಭಾಗದ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ