ದಾವಣಗೆರೆ :
ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ (ನೇಕಾರ) ಯುವಕರ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ, ಡಿ.25ರಂದು 2017-18ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.75ಕ್ಕೂ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗಾಗಿ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಲಾಗಿದೆ.
ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಕಾರ್ಯದರ್ಶಿ ದೇವರಾಜ್ ಟಿ. ಸಂಗೀತ್, ಅಂದು ಸಂಜೆ 4 ಗಂಟೆಗೆ ನಗರದ ಎಸ್‍ಕೆಪಿ ರಸ್ತೆಯಲ್ಲಿರುವ ಶ್ರೀಮಾರ್ಕಂಡೇಶ್ವರ ಸಮುದಾಯ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬೆಳ್ಳಿ ಪದಕ, ಪ್ರಶಸ್ತಿ ಫಲಕ ನೀಡುವ ಮೂಲಕ ಪುರಸ್ಕರಿಸಲಾಗುವುದು ಎಂದು ತಿಳಿಸಿದರು.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಶೇ.75ಕ್ಕೂ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳು ನಾಲ್ಕು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ವರ್ಗಾವಣೆ ಪತ್ರ ಮತ್ತು ಅಂಕ ಪಟ್ಟಿಯ ನಕಲು ಪ್ರತಿಯೊಂದಿಗೆ ಡಿ.15ರ ಒಳಗಾಗಿ ಶ್ರೀಮಾರ್ಕಂಡೇಶ್ವರ ಸಮುದಾಯ ಭವನದ ಕಚೇರಿಗೆ ತಲುಪಿಸಿ, ಹೆಸರು ನೋಂದಾಯಿಸಿಕೊಳ್ಳಬೇಕೆಂದು ಹೇಳಿದರು.
ಪ್ರತಿಭಾ ಪುರಸ್ಕಾರದ ಜೊತೆಗೆ ಸಮಾಜದ ಮಹಿಳೆಯರಿಗಾಗಿ ಅಂದು ಬೆಳಿಗ್ಗೆ 10ರಿಂದ 12 ಗಂಟೆಯ ವರೆಗೆ ರಂಗೋಲಿ ಸ್ಪರ್ಧೆ ಹಾಗೂ 3ರಿಂದ 8ನೇಯ ತರಗತಿಯ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ ಸಹ ಏರ್ಪಡಿಸಲಾಗಿದ್ದು, ಈ ಸ್ಪರ್ಧೆಗಳಲ್ಲಿ ಭಾಗವಹಿಸುವವರು ಸಹ ಡಿ.15ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 9448318902, 9945625259, 9916363155 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಅವರು ಕೋರಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ವೆಂಕಟೇಶ್ ಎಲ್ ಲಿಂಗಂಪಲ್ಲಿ, ನಿರ್ದೇಶಕರಾದ ಮಂಜುನಾಥ್ ಎಲ್. ಸಂಗೀತ್, ವಸಂತಕುಮಾರ್.ಪಿ, ಆನಂದ್, ಆರ್ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ