ಕೃಷಿ ಹೊಂಡದಲ್ಲಿ ತಾಯಿ ಮಕ್ಕಳ ಆತ್ಮಹತ್ಯೆ

ಬೆಂಗಳೂರು

      ಕೌಟುಂಬಿಕ ಕಲಹದಿಂದ ತಾಯಿ ತನ್ನಿಬ್ಬರು ಮಕ್ಕಳನ್ನು ಕೃಷಿ ಹೊಂಡಕ್ಕೆ ತಳ್ಳಿ ತಾನೂ ಹಾರಿ ಆತ್ಮಹತ್ಯೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಹೊಸಕೋಟೆಯ ಸರ್ಕಾರ್ ಗುಟ್ಟಹಳ್ಳಿಯಲ್ಲಿ ನಡೆದಿದೆ.

     ಸರ್ಕಾರ್ ಗುಟ್ಟಹಳ್ಳಿಯ ಲಕ್ಷ್ಮಮ್ಮ( 40) ಮಗ ಮೋಹಿತ್(6)ಮಗಳುಮೋನಿಷ(4)ಳನ್ನು ಪೆತ್ತನಹಳ್ಳಿ ಗೇಟ್‍ಬಳಿಗೆ ಕರೆದೊಯ್ದು ಅಲ್ಲಿನ ಜಮೀನೊಂದರಲ್ಲಿದ್ದ ಕೃಷಿ ಹೊಂಡಕ್ಕೆ ತಳ್ಳಿ ಕೊಲೆ ಮಾಡಿ ನಂತರ ತಾನೂ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

       ವಿಷಯ ತಿಳಿದು ಸ್ಥಳಕ್ಕಾಗಮಿಸಿದ ತಿರುಮಲಶೆಟ್ಟಿ ಹಳ್ಳಿ ಪೊಲೀಸರು ಸ್ಥಳೀಯರ ಸಹಾಯದಿಂದ ಮೃತ ದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ನೀಡಿದ್ದಾರೆ.ಆತ್ಮಹತ್ಯೆಗೆ ಕೌಟುಂಬಿಕ ಕಲಹವೆಂದು ಹೇಳಲಾಗುತ್ತಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳದಲ್ಲಿ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಗಂಡ-ಹೆಂಡತಿ ಜಗಳದಲ್ಲಿ ಜಗತ್ತನ್ನ ಅರಿಯದ ಮುಗ್ಧ ಮಕ್ಕಳು ಸಾವನ್ನಪ್ಪಿರೋದು ದುರಂತ. ಈ ಸಂಬಂಧ ತಿರುಮಲಶೆಟ್ಟಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link