ಮುಸ್ಲಿಮರೊಬ್ಬರಿಗೆ ಸಚಿವ ಸ್ಥಾನ ನೀಡಿ : ಹೆಚ್ ವಿಶ್ವನಾಥ್

ಬೆಂಗಳೂರು

    ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಚಿವ ಸಂಪುಟದಲ್ಲಿ ಪಕ್ಷದ ವತಿಯಿಂದ ಮುಸ್ಲಿಮರೊಬ್ಬರಿಗೆ ಸಚಿವ ಸ್ಥಾನ ನೀಡಬೇಕೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಒತ್ತಾಯಿಸಿದ್ದಾರೆ.

   ವಿಧಾನಸೌಧದಲ್ಲಿಂದು ಸುದ್ದಿಗಾರರ ಜತೆ ಮಾತನಾಡಿದ ಅವರು,ತಕ್ಷಣವೇ ಮಂತ್ರಿ ಮಂಡಲದಲ್ಲಿ ಮುಸ್ಲಿಮರೊಬ್ಬರಿಗೆ ಸ್ಥಾನ ನೀಡುವಂತೆ ಒತ್ತಾಯಿಸಿದ ಅವರು ತೆಲಂಗಾಣ,ಸೀಮಾಂಧ್ರದಲ್ಲಿ ಮುಸ್ಲಿಮರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ ಅದೇ ಮಾದರಿಯನ್ನು ಅನುಸರಿಸಬೇಕು ಎಂದು ಹೇಳಿದರು.

      ಪ್ರಧಾನಿ ನರೇಂದ್ರಮೋದಿ ಕೇಂದ್ರ ಸಚಿವ ಸಂಪುಟದಲ್ಲಿ ಮುಸ್ಲಿಮರಿಗೆ ಅವಕಾಶ ನೀಡಿದ್ದಾರೆ.ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಮುಮ್ತಾಜ್ ಅಲಿ ಖಾನ್ ಅವರನ್ನು ಮಂತ್ರಿ ಮಾಡಿದ್ದರು ಆದರೆ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಜೆಡಿಎಸ್ ವತಿಯಿಂದ ಮುಸ್ಲಿಮರಿಗೆ ಮಂತ್ರಿ ಸ್ಥಾನ ನೀಡಿಲ್ಲ ಎಂದು ವಿಷಾದಿಸಿದರು.

     ದೇಶದ ರಾಜಕೀಯ ಪರಿಸ್ಥಿತಿ ಬದಲಾಗಿದೆ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರು ನಮಗೆ ನಿರೀಕ್ಷಿತ ಬೆಂಬಲ ನೀಡದಿರಬಹುದು.ಆದರೆ ಇತ್ತೀಚಿನ ನಗರಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬೆಂಬಲ ನೀಡಿದ್ದಾರೆ, ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ.ಮತ್ತೆ ಆ ಜಾಗದಲ್ಲಿ ಮುಂದುವರಿಯುವ ಪ್ರಶ್ನೆಯೇ ಇಲ್ಲ ಎಂದರು

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link