ಕೊರೋನಾ ಸೋಂಕು : ನಾಗರಿಕರು ಮತ್ತು ನೌಕರರು ದೃತಿಗೆಡುವ ಅಗತ್ಯವಿಲ್ಲ : ಸಿಎಂ

ಬೆಂಗಳೂರು:

     ಕೋರೋನಾ ಸೋಂಕು ಹಿನ್ನಲೆಯಲ್ಲಿ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡ ಸಶಸ್ತ್ರ ಪೇದೆ ಸಾವಿಗೆ ಸಂಬಂಧಿಸಿದಂತೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಕೊರೋನಾ ಸೋಂಕಿತ ನಾಗರಿಕರು, ಸರ್ಕಾರಿ ಸಿಬ್ಬಂದಿ ದೃತಿಗೆಡುವ ಅಗತ್ಯವಿಲ್ಲ. ಸರ್ಕಾರ ನಿಮ್ಮೊಂದಿಗಿದೆ ಎಂದು ಭರವಸೆ ನೀಡಿದ್ದಾರೆ.

    ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಒಟ್ಟಾರೆ, ಕೋವಿಡ್ ಸೋಂಕಿನಿಂದ ಮರಣ ಹೊಂದಿದವರ ಸಂಖ್ಯೆ ಇತರ ಪ್ರಮುಖ ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ. ಯಾವುದೇ ಸೋಂಕಿತ ನಾಗರಿಕರು ಹಾಗೂ ಸರ್ಕಾರಿ ಸಿಬ್ಬಂದಿ ಯಾವುದೇ ಕಾರಣಕ್ಕೂ ದೃತಿಗೆಡುವ ಅಗತ್ಯವಿಲ್ಲ. ಸರ್ಕಾರ ಸದಾ ನಿಮ್ಮ ಜೊತೆಗಿರುತ್ತದೆ ಎಂದು ಭರವಸೆ ನೀಡಿದ್ದಾರೆ.

   ‘ಪೊಲೀಸ್ ಸಿಬ್ಬಂದಿ ಕೋವಿಡ್ ಸಂಬಂಧಿತ ಕೆಲಸಗಳಲ್ಲಿ ಮುಂಚೂಣಿಯಲ್ಲಿ ವಾರಿಯರ್ ಗಳಾಗಿ ಜೀವವನ್ನೇ ಪಣಕ್ಕಿಟ್ಟು ಶ್ಲಾಘನೀಯ ಕೆಲಸ ಮಾಡುತ್ತಿದ್ದು, ಅವರಿಗಾಗಿಯೇ ಪ್ರತ್ಯೇಕ ಕೋವಿಡ್ ಪರೀಕ್ಷಾ ಕೇಂದ್ರ ಪ್ರಾರಂಭಿಸಲಾಗುತ್ತಿದೆ. ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲು ಎಲ್ಲ ಕ್ರಮಗಳನ್ನೂ ತೆಗೆದುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

     ಮುಖ್ಯಮಂತ್ರಿಯವರಿಂದ ಸಂತಾಪ ಕರ್ನಾಟಕ ರಾಜ್ಯ ಮೀಸಲು ಪಡೆಯ ಬೆಂಗಳೂರು ನಗರದ 4ನೇ ಬೆಟಾಲಿಯನ್‌ನಲ್ಲಿ ಸಶಸ್ತ್ರ ಪೇದೆಯಾಗಿದ್ದ ಮಂಜೇಶ್ ಅವರು, ಕೋವಿಡ್ ಸೋಂಕು ದೃಢಪಟ್ಟ ಕಾರಣ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ದುಃಖಕರ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap