ಆರು ಮಂದಿಯನ್ನು ಬಲಿ ಪಡೆದ ಎಚ್1ಎನ್1

ಬೆಂಗಳೂರು

     ಕಳೆದ ತಿಂಗಳಿನಲ್ಲಿ ಮಾರಕ ರೋಗ ಎಚ್1ಎನ್1 ರಾಜ್ಯಕ್ಕೆ ಕಾಲಿಟ್ಟಿದ್ದು, ಈವರೆಗೆ ಒಟ್ಟು ಆರು ಮಂದಿಯನ್ನು ಬಲಿ ಪಡೆದಿದೆ.

     ಬೆಂಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಎಚ್1ಎನ್?1 ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗಿವೆ. ಈ ಸಂಖ್ಯೆ ಇನ್ನೂ ಹೆಚ್ಚಾಗುವ ಶಂಕೆ ವ್ಯಕ್ತವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.

     ಸಪ್ಟೆಂಬರ್‍ನಿಂದ ರಾಜ್ಯದಲ್ಲಿ ಎಚ್1ಎನ್1 ಮಾರಕ ರೋಗಕ್ಕೆ ಬಲಿಯಾದವರ ಸಂಖ್ಯೆ 6ಕ್ಕೇರಿದೆ. ಹೀಗಾಗಿ ರಾಜ್ಯದಲ್ಲಿ ಎಚ್1ಎನ್1 ಪ್ರಕರಣಗಳನ್ನು ತಡೆಗಟ್ಟಲು ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ. 

       ರಾಜ್ಯದಲ್ಲಿ 2017-18ಕ್ಕೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ ಎಚ್1ಎನ್1 ಪ್ರಕರಣಗಳು ಕಡಿಮೆ ಇವೆ. ಆಗಸ್ಟ್‍ವರೆಗೆ ಕೇವಲ 39 ಪ್ರಕರಣಗಳು ವರದಿಯಾಗಿದ್ದವು. ನಂತರ ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ಪ್ರಕರಣಗಳ ಸಂಖ್ಯೆ ಸ್ವಲ್ಪ ಹೆಚ್ಚಾಗಿದೆ. ಆರೋಗ್ಯ ಇಲಾಖೆ ಈ ಸೋಂಕು ಹರಡುವುದನ್ನು ತಡೆಯಲು ಎಲ್ಲ ಆಸ್ಪತ್ರೆಗಳಲ್ಲೂ ಪ್ರತ್ಯೇಕ ವಾರ್ಡ್‍ಗಳನ್ನು ನಿಗದಿಪಡಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದೆ.

      ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ಕೇಂದ್ರದ ನೆರವಿನಡಿ ಆರಂಭಿಸಲಾಗಿರುವ “ಆರೋಗ್ಯ ಕರ್ನಾಟಕ” ಯೋಜನೆಯ ಲಾಭಪಡೆಯಲು ಸಾರ್ವಜನಿಕರು ಆರೋಗ್ಯ ಕಾರ್ಡ್‍ಗಳನ್ನು ಪಡೆಯಲು ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮನವಿ ಮಾಡಿದೆ.

       ಪ್ರಸ್ತುತ 11 ಆಸ್ಪತ್ರೆಗಳಲ್ಲಿ ಮಾತ್ರ ಕಾರ್ಡ್‍ಗಳನ್ನು ವಿತರಿಸಲಾಗುತ್ತಿದೆ. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಶೀಘ್ರವೇ ನೋಂದಣಿಯನ್ನು ಆರಂಭಿಸಲಾಗುವುದು ಎಂದು ತಿಳಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap