ಬೆಂಗಳೂರು
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹಾಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಹಾಗೂ ಇಲಾಖೆಯ ಪುನಾರಚನೆ ಕುರಿತು ಸರ್ಕಾರ ರಚಿಸಿದ್ದ ಎಂ ಆರ್ ಶ್ರೀನಿವಾಸ ಮೂರ್ತಿ ವರದಿಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಹೇಳಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ 3 ಕೋಟಿ 60 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾತ್ಮಾ ಗಾಂಧಿ ಮಾಧ್ಯಮ ಕೇಂದ್ರವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯವನ್ನು ವಾರ್ತಾ ಇಲಾಖೆ ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಮಾಡಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ