ಕುಡಿಯುವ ನೀರಿಗೆ ತುರ್ತು ಕ್ರಮ : ಶಾಸಕ ಎಂವಿವಿ

ಮಧುಗಿರಿ

      ಸರ್ಕಾರದಿಂದ ಹಲವಾರು ಯೋಜನೆಗಳನ್ನು ತಂದು ಕ್ಷೇತ್ರದ ಜನರ ಋಣ ತೀರಿಸಲಾಗುವುದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು.ತಾಲ್ಲೂಕಿನ ಗಂಜಲಗುಂಟೆ ಪಂಚಾಯಿತಿ ವ್ಯಾಪ್ತಿಯ ಹಳೆಹಟ್ಟಿ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ವಿವಿಧ ಕಾಮಗಾರಿ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬರ ಪೀಡಿತ ಪ್ರದೇಶದ ಕೆರೆಗಳಿಗೆ ನೀರು ಹರಿಸಲು ರಾಜ್ಯ ಸರ್ಕಾರ ಬದ್ದವಾಗಿದೆ. ತಾಲ್ಲೂಕಿನಲ್ಲಿ ಸಮರ್ಪಕವಾಗಿ ಮಳೆಯಾಗದೇ ಇರುವುದರಿಂದ ಮಳೆಗಾಲದಲ್ಲೇ ನೀರಿಗೆ ಸಾಕಷ್ಟು ತೊಂದರೆಯಾಗುತ್ತಿದೆ ಎಂದರು.

      ಸಮಸ್ಯೆಯನ್ನು ಬಗೆಹರಿಸಲು ನೀಲಿನಕ್ಷೆ ತಯಾರಿಸಲಾಗಿದ್ದು, ಜನರು ಹೆದರುವ ಅವಶ್ಯಕತೆಯಿಲ್ಲ ಎಂದು ತಿಳಿಸಿ, ಸರ್ಕಾರ ಬರ ಎದುರಿಸಲು ಸಕಲ ಸಿದ್ದತೆ ಮಾಡಿಕೊಂಡಿದೆ. ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಸಲಾಗುವುದು ಹಾಗೂ ಟ್ಯಾಂಕರ್ ಮೂಲಕ ನೀರು ಹರಿಸುವಂತೆ ಪಂಚಾಯಿತಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕ್ಷೇತ್ರದಲ್ಲಿ ನಿವೇಶನ, ವಸತಿ, ರಸ್ತೆ, ಚರಂಡಿ ಸೇರಿದಂತೆ ಹಲವು ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದರು.

       ಗಂಜಲಗುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ಕೆಲ ಗ್ರಾಮಗಳಲ್ಲಿ ಕುಡಿಯುವ ನೀರು ಮತ್ತು ರಸ್ತೆ ಸಮಸ್ಯೆ ಎದ್ದು ಕಾಣುತ್ತಿದೆ. ಸಾಮಾನ್ಯ ಸಮುದಾಯದವರಿಗೆ 100 ಮನೆಗಳ ಅವಶ್ಯಕತೆಯಿದೆ ಎಂದು ಶಾಸಕರಲ್ಲಿ ಮನವಿ ಮಾಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಕೊಂಡವಾಡಿ ತಿಮ್ಮಯ್ಯ, ತಾ.ಪಂ.ಉಪಾಧ್ಯಕ್ಷ ಲಕ್ಷ್ಮೀನರಸಪ್ಪ, ಎಇಇ ಸುರೇಶ್ ರೆಡ್ಡಿ, ಪಿಡಿಓ ರವಿಚಂದ್ರ, ಮುಂಖಡರಾದ ಟಿ.ರಾಮಣ್ಣ, ಸಿದ್ದಣ್ಣ, ಚಿಕ್ಕಣ್ಣ, ಟಿ.ಗೋವಿಂದರಾಜು, ಗ್ರಾಪಂ ಸದಸ್ಯರಾದ ಮಹದೇವ್, ಕಾಂತರಾಜು, ಶಿವಲಿಂಗಯ್ಯ, ನಾಗರಾಜು, ಅಂಜಪ್ಪ, ನಾಗರತ್ನಮ್ಮ ಇದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link