ಅದ್ಧೂರಿಯಾಗಿ ಛತ್ರಪತಿ ಶಿವಾಜಿ ಜಯಂತಿಯ ಮೆರವಣಿಗೆ

ಬಳ್ಳಾರಿ

      ಜಿಲ್ಲಾಡಳಿತ, ಜಿ.ಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಮುನ್ಸಿಪಲ್ ಕಾಲೇಜು ಮೈದಾನದಲ್ಲಿಂದು ಛತ್ರಪತಿ ಶಿವಾಜಿ ಅವರ ಭಾವಚಿತ್ರದ ಮೆರವಣಿಗೆಗೆ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ ಅವರು ಚಾಲನೆ ನೀಡಿದರು.

       ಮೆರವಣಿಗೆಯಲ್ಲಿ ತಹಶೀಲ್ದಾರ್ ಯು.ನಾಗರಾಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ನಾಗರಾಜ್, ಪಾಲಿಕೆ ಸದಸ್ಯರು ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಇತರೆ ಗಣ್ಯವ್ಯಕ್ತಿಗಳು ಇದ್ದರು.
ಮೆರವಣಿಗೆಯು ಮುನ್ಸಿಪಲ್ ಕಾಲೇಜು ಮೈದಾನದಿಂದ ಪ್ರಾರಂಭವಾಗಿ ಗಡಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್‍ಪೇಟೆ ಪೊಲೀಸ್ ಠಾಣೆ, ಹೆಚ್.ಆರ್.ಗವಿಯಪ್ಪ ವೃತ್ತ ಮಾರ್ಗವಾಗಿ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರಕ್ಕೆ ತಲುಪಿತು. ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ತಾಷರಮ್ ಡೋಳ್ಳು, ನೃತ್ಯ ಕಲಾ ಪ್ರಕಾರ ತಂಡಗಳು, ವೀರಗಾಸೆ ಹಾಗೂ ಹಲವು ಜಾನಪದ ಕಲಾತಂಡಗಳು ಭಾಗವಹಿಸಿ ಮೆರವಣಿಗೆಯನ್ನು ಆಕರ್ಷಕಗೊಳಿಸಿದವು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link