ಪಂಚರಾಜ್ಯಗಳಲ್ಲಿ ಬಿಜೆಪಿ ಹಿನ್ನೆಡೆ- ಅವಲೋಕನಕ್ಕೆ ಮುಂದಾದ ಕರ್ನಾಟಕ ಬಿಜೆಪಿ

ಬೆಳಗಾವಿ

        ಪಂಚರಾಜ್ಯಗಳಲ್ಲಿ ಬಿಜೆಪಿ ಹಿನ್ನಡೆ ಕಂಡಿದ್ದು, ಸೋಲಿನ ಬಗ್ಗೆ ಚರ್ಚಿಸಲು ರಾಜ್ಯ ಬಿಜೆಪಿ ತಿಂಗಳಾಂತ್ಯಕ್ಕೆ ಸಭೆ ನಡೆಸಲು ತೀರ್ಮಾನಿಸಿದೆ. ಕರ್ನಾಟಕವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು, ಸಂಸದರು, ರಾಜ್ಯಸಭಾ ಸದಸ್ಯರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು ಸೇರಿದಂತೆ ಎಲ್ಲಾ ಪದಾಧಿಕಾರಿಗಳು ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

       ಬೆಳಗಾವಿ ಅಧಿವೇಶನದ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ರೂಪಿಸಬೇಕಾದ ರಣತಂತ್ರಗಳು ಹಾಗೂ ಆಡಳಿತಾರೂಢ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸುವುದು, ಪಕ್ಷ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.

         ದೆಹಲಿಯಲ್ಲಿ ಇಂದುನಡೆದ ತುರ್ತು ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಈ ಬಗ್ಗೆ ನಿರ್ದೇಶನ ನೀಡಲಿದ್ದು, ರಾಜ್ಯದಿಂದ ರಾಷ್ಟ್ರೀಯ ಸಂಘಟನಾ ಸಹಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ ಭಾಗವಹಿಸಲಿದ್ದಾರೆ.ವಿಧಾನಮಂಡಲ ಅಧಿವೇಶನ ಕಾರಣ ಬಿ.ಎಸ್.ಯಡಿಯೂರಪ್ಪ ದೆಹಲಿಯ ಸಭೆಯಲ್ಲಿ ಭಾಗವಹಿಸುತ್ತಿಲ್ಲ.

         ಲೋಕಸಭೆ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮುಂದುವರೆದಿದ್ದಲ್ಲಿ ಇದರಿಂದಾಗಿ ಬಿಜೆಪಿಗೆ ಹಿನ್ನಡೆಯಾಗುವ ಸಂಭವವಿದ್ದು, ಗಟ್ಟಿಯಾದ ರಣತಂತ್ರವನ್ನು ಬಿಜೆಪಿ ರೂಪಿಸಲಿದೆ. ಕೇಂದ್ರ ವರಿಷ್ಠರು ನೀಡಿದ ಸೂಚನೆಯಂತೆ ಯಡಿಯೂರಪ್ಪ ಈಗಾಗಲೇ ಮೌಖಿಕವಾಗಿ ಸೂಚನೆ ನೀಡಲಾಗಿದ್ದು, ಸಭೆಯ ಅಧಿಕೃತ ದಿನಾಂಕ ಪ್ರಕಟವಾಗುವುದು ಬಾಕಿಯಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap