ಬೆಂಗಳೂರು
2019-20 ನೇ ಸಾಲಿನ ಆಯವ್ಯಯದಲ್ಲಿ ಕೃಷಿಗೆ ಹೆಚ್ಚಿನ ಒತ್ತು ನೀಡುವ ಹಾಗು ಉತ್ತಮ ರೈತಪರ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ವಿಧಾನಸೌಧದಲ್ಲಿ ರೈತ ಮುಖಂಡರ ಜೊತೆ ಇಂದು ಆಯವ್ಯಯ ಪೂರ್ವಭಾವಿ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಬಜೆಟ್ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ, ಅನುದಾನ ಹಂಚಿಕೆ, ಯೋಜನೆಗಳ ಅನುಷ್ಠಾನಗಳ ಬಗ್ಗೆ ಇಲಾಖಾವಾರು ಮಾಹಿತಿ ಪಡೆದಿದ್ದೇನೆ. ರೈತ ಮುಖಂಡರ ಜೊತೆ ಚರ್ಚೆ ನಡೆಸಿ ಸಲಹೆ ಪಡೆದಿದ್ದೇನೆ ಎಂದು ತಿಳಿಸಿದರು.
ಬಿತ್ತನೆ ಬೀಜ, ಕಬ್ಬಿನ ಬಾಕಿ, ಕೃಷಿ ಮಾರುಕಟ್ಟೆ, ಕಬ್ಬಿನ ಬೆಲೆ, ದ್ರಾಕ್ಷಿ ಹಣ್ಣು, ತೋಟಗಾರಿಕಾ ಬೆಳೆಗಳ ಬಗ್ಗೆ ಸಮಗ್ರ ಚರ್ಚೆ ನಡೆಸಲಾಗಿದೆ. ರೈತರು ನೀಡಿರುವ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡು ಕೃಷಿಪರ, ರೈತಪರ ಉತ್ತಮ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ