ದಾವಣಗೆರೆ:
ಶ್ರೀ ಜಿ.ಮಲ್ಲಿಕಾರ್ಜುನಪ್ಪ ಹಾಲಮ್ಮ ಚಾರಿಟಿ ಫೌಂಡೇಷನ್ ವತಿಯಿಂದ ಇಂದು (ಫೆ.10ರಂದು) ನಗರದ ಹದಡಿ ರಸ್ತೆಯಲ್ಲಿರುವ ಎಂ.ಬಿ. ರೈಸ್ ಮಿಲ್ ಆವರಣದ ಮಾಗನೂರು ಬಸಪ್ಪ ಕಾಂಪೌಂಡ್‍ನಲ್ಲಿ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಫೌಂಡೇಷನ್ ಅಧ್ಯಕ್ಷ ಕೆ.ಬಿ.ಶಂಕರನಾರಾಯಣ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ ಬೆಳಗ್ಗೆ 9.30ರಿಂದ 10.30ರ ವರೆಗೆ ಮಾಂಗಲ್ಯ ಧಾರಣೆ ನಡೆಯಲಿದೆ. ಬೆಳಿಗ್ಗೆ 11.30ರಿಂದ ನಡೆಯುವ ಸಭಾ ಕಾರ್ಯಕ್ರಮದ ಸಾನಿಧ್ಯವನ್ನು ಸಿರಿಗೆರೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ವೀರಶೈವ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ, ಕಾಗಿನೆಲೆ ಕನಕ ಗುರುಪೀಠದ ಶ್ರೀನಿರಂಜನಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಅಂಬಿಗರ ಚೌಡಯ್ಯ ಪೀಠದ ಶ್ರೀ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ, ಹೆಬ್ಬಾಳು ವಿರಕ್ತ ಮಠದ ಶ್ರೀಮಹಾಂತ ರುದ್ರೇಶ್ವರ ಸ್ವಾಮೀಜಿ, ಆವರಗೊಳ್ಳ ಪುರವರ್ಗ ಮಠದ ಶ್ರೀಓಂಕಾರ ಶಿವಾಚಾರ್ಯ ಸ್ವಾಮೀಜಿ, ಚಿತ್ರದುರ್ಗ ಮಾದಾರ ಗುರುಪೀಠದ ಶ್ರೀಬಸವ ಮಾದಾರ ಚನ್ನಯ್ಯ ಸ್ವಾಮೀಜಿ, ಭೋವಿ ಗುರುಪೀಠದ ಶ್ರೀಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ದಾವಣಗೆರೆ ವಿರಕ್ತ ಮಠದ ಶ್ರೀಬಸವಪ್ರಭು ಸ್ವಾಮೀಜಿ, ಯಾದವ ಗುರುಪೀಠದ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ, ಮಾಚಿದೇವ ಮಹಾಸಂಸ್ಥಾನ ಮಠದ ಶ್ರೀಬಸವಮಾಚಿದೇವ ಸ್ವಾಮೀಜಿ ವಹಿಸಿಕೊಳ್ಳಲಿದ್ದಾರೆಂದು ಮಾಹಿತಿ ನೀಡಿದರು.
ಸಂಸದ ಜಿ.ಎಂ.ಸಿದ್ದೇಶ್ವರ, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ.ಎ.ಹೆಚ್.ಶಿವಯೋಗಿಸ್ವಾಮಿ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಬಸವರಾಜ ಬೊಮ್ಮಾಯಿ, ಶಾಸಕರಾದ ಎಸ್.ಎ.ರವೀಂದ್ರನಾಥ, ಮಾಡಾಳ್ ವಿರೂಪಾಕ್ಷಪ್ಪ , ಎಸ್.ವಿ.ರಾಮಚಂದ್ರ , ಕರುಣಾಕರ ರೆಡ್ಡಿ, ಎಂ.ಪಿ.ರೇಣುಕಾಚಾರ್ಯ, ಪ್ರೊ.ಎನ್.ಲಿಂಗಣ್ಣ, ಆಯನೂರು ಮಂಜುನಾಥ, ವೈ.ಎ.ನಾರಾಯಣಸ್ವಾಮಿ, ಮಾಜಿ ಶಾಸಕರಾದ ಟಿ.ಜಿ.ಗುರುಸಿದ್ಧನಗೌಡ, ಬಿ.ಪಿ.ಹರೀಶ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತರಾವ್ ಜಾಧವ್ ಮತ್ತಿತರರು ಭಾಗವಹಿಸಲಿದ್ದಾರೆಂದು ವಿವರಿಸಿದರು.
ಸುಮಾರು 50 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಫೌಂಡೇಷನ್‍ನ ಸಲಹಾ ಸಮಿತಿಯ ಕೊಂಡಜ್ಜಿ ಜಯಪ್ರಕಾಶ, ಬಿ.ಎಸ್.ಜಗದೀಶ, ಏಕನಾಥ ರಾಯ್ಕರ್, ಆದಿನಾಥ, ವಿನಾಯಕ ರಾನಡೆ, ಭಾಗವತ್ ಮತ್ತಿತರರು ಹಾಜರಿದ್ದರು.