ಬೆಂಗಳೂರು:
ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡುವುದಕ್ಕೂ ಮುನ್ನ ಕಾಂಗ್ರೆಸ್ ನಾಯಕರು ನಮ್ಮನ್ನು ಸಂಪರ್ಕಿಸಿಲ್ಲ ಎಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ ಹೇಳಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವರೆಗೂ ಕಾಂಗ್ರೆಸ್ ಪಕ್ಷದ ಯಾವುದೇ ಸ್ನೇಹಿತರೂ ನಮ್ಮನ್ನು ಸಂಪರ್ಕಿಸಿ ಮಾತುಕತೆ ನಡೆಸಿಲ್ಲ. ನಿನ್ನೆ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ್ದಾರೆ. ಆದರೂ ನಮ್ಮ ಅಭಿಪ್ರಾಯವನ್ನು ಕೇಳಿಲ್ಲ. ಕಾಂಗ್ರೆಸ್ ನಾಯಕರ ವರ್ತನೆ ಹೇಗಿದೆ ಎಂದರೆ, ಅವರಿಗೆ ನಮ್ಮ ಬೆಂಬಲ ಅಗತ್ಯವಿಲ್ಲ ಎಂದೆನಿಸುತ್ತಿದೆ. ಸ್ವತಂತ್ರವಾಗಿ ಹೋರಾಟ ಮಾಡಲು ಅವರು ನಿರ್ಧರಿಸುವಂತಿದೆ ಎಂದು ಹೇಳಿದ್ದಾರೆ.