ಮೇ.31 ರ ವರೆಗೆ ಲಾಕ್‍ಡೌನ್ ವಿಸ್ತರಣೆ : ಕೇಂದ್ರದ ಮಾರ್ಗಸೂಚಿ!!

ನವದೆಹಲಿ: 

      ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಹೇರಲಾಗಿರುವ ಲಾಕ್‍ಡೌನ್ ಅವಧಿಯನ್ನು ನಿರೀಕ್ಷೆಯಂತೆಇದೇ ಮೇ.31 ರವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

      ಈ ಕುರಿತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ(ಓಆಒಂ) ಆದೇಶ ಹೊರಡಿಸಿದ್ದು, ಮೇ. 31ರವರೆಗೆ ಅಂದರೆ ಎರಡು ವಾರಗಳ ಕಾಲ ಲಾಕ್‍ಡೌನ್ ಅವಧಿ ವಿಸ್ತರಿಸಲಾಗಿದೆ ಎಂದು ಸ್ಪಷ್ಟಪಡಿಸಿದೆ.

      ನಿನ್ನೆ ಸಂಜೆಗೆ ಮೂರನೇ ಹಂತದ ಲಾಕ್‍ಡೌನ್ ಮುಕ್ತಾಯಗೊಂಡಿದ್ದು,ಸಂಜೆಯಾದರೂ ಮಾರ್ಗಸೂಚಿ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರವು ಮೇ 19 ರವರೆಗೆ 3ನೇ ಲಾಕ್ ಡೌನ್ ವಿಸ್ತರಿಸಿ ಆದೇಶ ಹೊರಡಿಸಿತ್ತು. ಆ ನಂತರ ಕೇಂದ್ರದ ಮಾರ್ಗಸೂಚಿ ಬಿಡುಗಡೆಯಾಯಿತು. ಇದರಿಂದಾಗಿ ಇಂದಿನಿಂದ ಹೊಸ ಮಾರ್ಗಸೂಚಿಗಳೊಂದಿಗೆ ನಾಲ್ಕನೇ ಹಂತದ ಲಾಕ್‍ಡೌನ್ ಜಾರಿಗೆ ಬರಲಿದೆ.

       ಕೋವಿಡ್ -19 ಹರಡುವಿಕೆಯನ್ನು ನಿಯಂತ್ರಿಸಲು ದೇಶದಲ್ಲಿ ಇನ್ನೂ 14 ದಿನಗಳವರೆಗೆ ಲಾಕ್‌ಡೌನ್ ಕ್ರಮಗಳನ್ನು ಜಾರಿಗೆ ತರಬೇಕಾಗಿದೆ ಎಂದು ಎನ್‌ಡಿಎಂಎ ಆದೇಶದಲ್ಲಿ ತಿಳಿಸಿದೆ.

      ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 6 (2) (ಐ) ಅಡಿಯಲ್ಲಿ ಅಧಿಕಾರವನ್ನು ಚಲಾಯಿಸುವ ಎನ್‌ಡಿಎಂಎ, ಮೇ 31 ರವರೆಗೆ ಲಾಕ್‌ಡೌನ್ ಕ್ರಮಗಳನ್ನು ಮುಂದುವರಿಸಲು ಭಾರತ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ರಾಜ್ಯ ಅಧಿಕಾರಿಗಳ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ನಿರ್ದೇಶಿಸುತ್ತದೆ. ಎಂದು ಎನ್‌ಡಿಎಂಎ ಸದಸ್ಯ ಕಾರ್ಯದರ್ಶಿ ಜಿವಿವಿ ಶರ್ಮಾ ಹೇಳಿದರು. ಇದೇ ವೇಳೆ ಕೋವಿಡ್ ಹರಡುವಿಕೆಯನ್ನು ಒಳಗೊಂಡಿರುವಾಗ ಆರ್ಥಿಕ ಚಟುವಟಿಕೆಗಳನ್ನು ತೆರೆಯುವ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಮಾರ್ಗಸೂಚಿಗಳಲ್ಲಿ ಅಗತ್ಯ ಮಾರ್ಪಾಟು ಮಾಡುವಂತೆ ಕೇಂದ್ರ ಗೃಹ ಕಾರ್ಯದರ್ಶಿ ನೇತೃತ್ವದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಪ್ರಾಧಿಕಾರ  ನಿರ್ದೇಶಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

      ದೇಶದಲ್ಲಿ ಮೇ 31ರವರೆಗೆ ರೈಲು, ಮೆಟ್ರೋ, ವಿಮಾನ ಸಂಚಾರವನ್ನು ನಿಷೇಧಿಸಲಾಗಿದೆ. ವೈದ್ಯಕೀಯ ಉಪಕರಣಗಳು ಮತ್ತು ವಸ್ತುಗಳ ಸಾಗಾಟಕ್ಕೆ ಮಾತ್ರ ವಿಮಾನವನ್ನು ಬಳಸಲು ಅವಕಾಶ ನೀಡಲಾಗಿದೆ. ಶಾಲೆಗಳು, ಕಾಲೇಜುಗಳು ಮುಂತಾದ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಮೇ 31ರವರೆಗೆ ತೆರೆಯುವಂತಿಲ್ಲ. ಹಾಗೇ, ಆಯಾ ರಾಜ್ಯಗಳ ರೆಡ್, ಗ್ರೀನ್ ಮತ್ತು ಆರೆಂಜ್​ ಜೋನ್​ಗಳಲ್ಲಿ ನಿಯಮಗಳನ್ನು ಸಡಿಲಗೊಳಿಸುವ ಮತ್ತು ಬಿಗಿಗೊಳಿಸುವ ನಿರ್ಧಾರವನ್ನು ರಾಜ್ಯ ಸರ್ಕಾರಗಳಿಗೆ ಬಿಡಲಾಗಿದೆ.

ಯಾವುದಕ್ಕೆ ನಿರ್ಬಂಧ :

  •  ದೇಶಿಯ ವೈದ್ಯಕೀಯ ಸೇವೆ, ಏರ್ ಅಂಬ್ಯುಲೆನ್ಸ್ ಮತ್ತು ಸುರಕ್ಷತೆ ಉದ್ದೇಶ ಅಥವಾ ಗೃಹ ಸಚಿವಾಲಯದಿಂದ ಅನುಮತಿ ಪಡೆದಿರುವ ವಿಮಾನ ಪ್ರಯಾಣ ಹೊರತುಪಡಿಸಿದಂತೆ ಎಲ್ಲಾ ದೇಶಿಯ ಮತ್ತು ಅಂತಾರಾಷ್ಟ್ರೀಯ ವಿಮಾನ ಪ್ರಯಾಣವನ್ನು ದೇಶಾದ್ಯಂತ ನಿರ್ಬಂಧಿಸಲಾಗಿದೆ.
  •  ಎಲ್ಲಾ ಸಿನಿಮಾ ಹಾಲ್ ಗಳು, ಶಾಫಿಂಗ್ ಮಾಲ್ , ಜಿಮ್, ಈಜುಕೊಳ, ಮನೋರಂಜನಾ ಪಾರ್ಕ್ , ಬಾರ್ ಗಳು ಮತ್ತು ಸಭೆ ಸಮಾರಂಭಗಳು ನಡೆಯುವ ಎಲ್ಲಾ ಸ್ಥಳಗಳೂ ಮೇ 31ರವರೆಗೂ ಮುಚ್ಚಲ್ಪಟ್ಟಿರುತ್ತವೆ.
  • ಕಚೇರಿಗಳು ಮತ್ತು ಉದ್ಯೋಗಸ್ಥರ ಆರೋಗ್ಯ ದೃಷ್ಟಿಯಿಂದ ಮೊಬೈಲ್ ಫೋನ್ ಹೊಂದಿರುವ ಪ್ರತಿಯೊಬ್ಬ ಉದ್ಯೋಗಿಯೂ ಆರೋಗ್ಯ ಸೇತು ಆಪ್ ಹೊಂದಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಆರೋಗ್ಯ ಸೇತು ಆಪ್ ನಲ್ಲಿ ಆರೋಗ್ಯದ ಪ್ರತಿನಿತ್ಯ ಮಾಹಿತಿ ನೀಡುವಂತೆ ಜಿಲ್ಲಾ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಕಂಟೇನ್ಮೆಂಟ್ ನಲ್ಲಿ ಕಟ್ಟುನಿಟ್ಟಿನ ಕ್ರಮ:

      ನೊವೆಲ್ ಕೊರೊನಾ ವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆಯಲ್ಲಿ ಕಂಟೇನ್ಮೆಂಟ್ ಝೋನ್ ಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಕಂಟೇನ್ಮೆಂಟ್ ಝೋನ್ ಗಳಲ್ಲಿ ಕಾರ್ಯ ಚಟುವಟಿಕೆಗಳ ಬಗ್ಗೆ ಜಿಲ್ಲಾಡಳಿತವೇ ತೀರ್ಮಾನ ತೆಗೆದುಕೊಳ್ಳಲು ಅನುಮತಿ ನೀಡಲಾಗಿದೆ.

      3 ವರ್ಗಗಳನ್ನಾಗಿ ವಿಂಗಡಿಸಿದ ಕೇಂದ್ರ ಸರ್ಕಾರ: ಕೇಂದ್ರ ಸರ್ಕಾರವು ಮಾರ್ಗಸೂಚಿಯಲ್ಲಿ ಮೂರು ವಿಧಗಳನ್ನು ವಿಂಗಡಿಸಲಾಗಿದೆ. ಮೊದಲೇ ವರ್ಗದಲ್ಲಿ 10 ವರ್ಷದೊಳಗಿನ ಮಕ್ಕಳಿದ್ದು, ಎರಡನೇ ವರ್ಗದಲ್ಲಿ 60 ವರ್ಷದ ಮೇಲ್ಪಟ್ಟ ವೃದ್ಧರು ಹಾಗೂ ಮೂರನೇ ವರ್ಗದಲ್ಲಿ ಅನಾರೋಗ್ಯಕ್ಕೆ ತುತ್ತಾದವರನ್ನು ಗುರುತಿಸಲಾಗಿದೆ. ಈ ಮೂರು ವರ್ಗದ ಜನರು ಮನೆಗಳಿಂದ ಹೊರ ಬರದಂತೆ ಎಚ್ಚರಿಕೆ ನೀಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap