ದಾವಣಗೆರೆ :
ಮಟ್ಕಾ ಜೂಜಾಟ ಪ್ರಕರಣದ ವಿಚಾರಣೆಗೆಂದು ಕರೆ ತಂದಿದ ವ್ಯಕ್ತಿಯೊಬ್ಬ ದಾವಣಗೆರೆ ಜಿಲೆಲಯ ಚನ್ನಗಿರಿ ಪಟ್ಟಣದ ಪೊಲೀಸ್ ಠಾಣೆಯಲ್ಲೇ ಸಾವನ್ನಪ್ಪಿದ್ದು, ಆಕ್ರೋಶಗೊಂಡ ಮೃತನ ಕುಟುಂಬಸ್ಥರು ಹಾಗೂ ಸ್ಥಳೀಯರು ಪೊಲೀಸ್ ವ್ಯಾನ್ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಚನ್ನಗಿರಿಯ ಟಿಪ್ಪು ನಗರದ ವಾಸಿ ಬಡಿಗೆ ಕೆಲಸಗಾರ ಆದಿಲ್ ಮೃತ ವ್ಯಕ್ತವಾಗಿದ್ದು, ಮಟ್ಕಾ ಚೀಟಿ ಬರೆಯುತ್ತಿದ್ದ ಶಂಕೆ ಮೇರೆ ಪೊಲೀಸರು ಆದಿಲ್ ನನ್ನು ಶುಕ್ರವಾರ ಮಧ್ಯಾಹ್ನ ಠಾಣೆಗೆ ಕರೆತಂದು, ವಿಚಾರಣಗೊಳಪಡಿಸಿದ್ದಾರೆ. ಆದರೆ ವಿಚಾರಣೆ ವೇಳೆ ಲಾಕಪ್ ನಲ್ಲಿದ್ದ ಆದಿಲ್ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಪೊಲೀಸರು ಆತನನ್ನು ಚಿಕಿತ್ಸಗೆಂದು ಆಸ್ಪತ್ರೆಗೆ ಕರೆದೊಯ್ದರಾದರೂ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಇದರಿಂದ ಆಕ್ರೋಶಗೊಂಡ ಕುಟುಂಬಸ್ಥರು, ಸ್ಥಳೀಐರು ಸೇರಿ ಸುಮಾರು ೫೦೦ ಕ್ಕೂ ಹೆಚ್ಚು ಮಂದಿ ಶುಕ್ರವಾರ ರಾತ್ರಿ ಠಾಣೆಯ ಮುಂದೆ ಪ್ರತಿಭಟನೆ ನಡೆರಸಿದ್ದಾರೆ. ಈ ವೇಳೆ ಪೊಲೀಸರು ಠಾಣೆಗೆ ಬಿಗ ಹಾಕಿಕೊಂಡು ಹೋಗಿದ್ದಾರೆ. ಇದರಿಂದ ಆಕ್ರೋಶಗೊಂಡ ಉದ್ರಿಕ್ತರು ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರು ಗಾಯಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ