ಕುಣಿಗಲ್
ರಾಜ್ಯದಲ್ಲಿ ಮೈತ್ರಿ ಸರ್ಕಾರ ಸುಭದ್ರವಾಗಿದ್ದು ಯಾವುದೇ ಕಾರಣಕ್ಕೂ ಬಿಜೆಪಿಯವರ ಕನಸು ನನಸಾಗುವುದಿಲ್ಲ ಎಂದು ರಾಜ್ಯದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಪಟ್ಟಣದ ಕಾಂಗ್ರೆಸ್ ಕಛೇರಿಯ ಬಳಿ ಪುರಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರುಗಳು ಮನೆ ಮನೆಗೆ ಹಲವು ಬಾರಿ ಎಡತಾಕು ಮೂಲಕ ಮತ ಕೇಳಿ ಪಟ್ಟಣದಲ್ಲಿರುವ 23 ವಾರ್ಡ್‍ಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಆಯ್ಕೆ ಆಗುವಂತೆ ಮಾಡಬೇಕೆಂದು ಕರೆ ನೀಡಿದರು.
ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಥಾನಗಳು ಲಭಿಸಿರುವುದಿಲ್ಲ,ದೇಶದಲ್ಲೂ ಸಹ ಸಾಧ್ಯವಾಗಿರುವುದಿಲ್ಲ 1977-78ರ ಚುನಾವಣೆಯಲ್ಲಿಯೂ ಇಂತಹ ಕಠಿಣ ಪರಿಸ್ಥಿತಿಯನ್ನ ಕಾಂಗ್ರೆಸ್ ಪಕ್ಷ ಎದುರಿಸಿ 3 ವರ್ಷಗಳಿಲ್ಲಿಯೇ ಚೇತರಿಸಿಕೊಂಡು ರಾಷ್ಟ್ರದಲ್ಲಿ ಸುಭದ್ರ ಸರ್ಕಾರ ನೀಡಿದೆ.ಇಂತಹ ಕಠಿಣ ಪರಿಸ್ಥಿತಿಯಲ್ಲಿ ಕಾರ್ಯಕರ್ತರು ಎದೆಗುಂದದೇ ನಿರಾಶ ಮನೋಭಾವವನ್ನ ಬಿಟ್ಟು ಕಾಂಗ್ರೆಸ್ ಪಕ್ಷದ ಸಂಘಟನೆಗೆ ದುಡಿಯಬೇಕು, ರಾಜ್ಯದಲ್ಲಿ ಸುಭದ್ರ ಸರ್ಕಾರವಿದ್ದು, ಕುಮಾರಸ್ವಾಮಿಮುಖ್ಯಮಂತ್ರಿಯಾಗಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್,ದಿನೇಶ್ ಗುಂಡೂರಾವ್ ರಂತಹ ನಾಯಕರಿಂದ ಸುಭದ್ರವಾಗಿದೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾರ್ಯಕರ್ತರು ಮನೆ-ಮನೆಗೆ ತೆರಳಿ ಮತಯಾಚಿಸಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಡಾ.ರಂಗನಾಥ್, ಜಿಲ್ಲಾ ಅಧ್ಯಕ್ಷ ರಾಮಕೃಷ್ಣಯ್ಯ, ಡಾ.ಸುಂದರ್, ಕಾಂಗ್ರೆಸ್ ಮುಖಂಡ ಕೆಂಪೀರೇಗೌಡ, ಜಿ.ಪಂ.ಮಾಜಿ ಸದಸ್ಯ ಲಕ್ಷ್ಮೀನಾರಾಯಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಸನಾ ಉಲ್ಲಾ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
