ರಾಜ್ಯಾದ್ಯಂತ ಏಕಕಾಲದಲ್ಲಿ 11 ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಯುಕ್ತ ಕಾರ್ಯಾಚರಣೆ

ಬೆಂಗಳೂರು: 

    ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಪ್ರಮುಖ ಆರೋಪಿಗಳ ನಿವಾಸಗಳ ಮೇಲೆ ದಾಳಿ ಮಾಡಿದ ಬೆನ್ನಲ್ಲೇ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ.ಲೋಕಾಯುಕ್ತ ಎಸ್ ಪಿ ಸುರೇಶ್ ಬಾಬು ನೇತೃತ್ವದಲ್ಲಿ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

   ಭ್ರಷ್ಟಾಚಾರ ಎಸಗಿದ ಆರೋಪ ಕೇಳಿಬಂದ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ​​11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ. ಕೋಲಾರ ತಹಶೀಲ್ದಾರ್​ ವಿಜಿಣ್ಣ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಯುತ್ತಿದೆ. ಹಾಸನದಲ್ಲಿ ಗ್ರೇಡ್-1 ಕಾರ್ಯದರ್ಶಿ ಜಗದೀಶ್​ ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆದಿದೆ.

    ಮೈಸೂರಿನಲ್ಲಿ ನೀರಾವರಿ ಇಲಾಖೆಯ ಸೂಪರಿಡೆಂಟ್ ಇಂಜಿನಿಯರ್ ಮಹೇಶ್ ಕೆ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಮೈಸೂರಿನ ಜೆಸಿ ನಗರದಲ್ಲಿರುವ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಜತೆಗೆ, ಗೋಕುಲಂ ಕಚೇರಿಯಲ್ಲಿಯೂ ಕಡತಗಳ ಪರಿಶೀಲನೆ ನಡೆಯುತ್ತಿದೆ. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಕಾರ್ಯಾಚರಣೆ ನಡೆದಿದೆ.

   ಮಂಡ್ಯದಲ್ಲಿ ನಿವೃತ್ತ ಇಇ ಶಿವರಾಜ್ ಮತ್ತು ಸಂಬಂಧಿಕರ ಮನೆಗಳ ಮೇಲೆ ದಾಳಿ ನಡೆದಿದೆ. ಮಂಡ್ಯ ಜಿಲ್ಲೆಯ 3 ಕಡೆ, ಮೈಸೂರಿನ 2 ಕಡೆ ದಾಳಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಇಜ್ಜಲಘಟ್ಟದಲ್ಲಿರುವ ಶಿವರಾಜ್​ಗೆ ಸೇರಿದ ಫಾರ್ಮ್​ಹೌಸ್​, ಶಿವರಾಜ್​ ತಂದೆ ಮನೆ, ಜಲ್ಲಿ ಕ್ರಷರ್​​ ಮೇಲೂ ದಾಳಿ ನಡೆದಿದೆ. ಲೋಕಾಯುಕ್ತ ಎಸ್​​​ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.

   ಹಾಸನದಲ್ಲಿ ಗ್ರೇಡ್​​​-1 ಕಾರ್ಯದರ್ಶಿ ಮನೆಗಳ ಮೇಲೆ ದಾಳಿ ನಡೆದಿದೆ. ಗ್ರೇಡ್​​​-1 ಕಾರ್ಯದರ್ಶಿ ಎನ್​ಎಂ ಜಗದೀಶ್​ಗೆ ಸೇರಿದ ಹಾಸನದ ಮನೆ, ಬೆಂಗಳೂರಿನ ಮನೆಗಳಲ್ಲಿ ದಾಖಲೆ ಪರಿಶೀಲನೆ ನಡೆಯುತ್ತಿದೆ. ಲೋಕಾಯುಕ್ತ ಡಿವೈಎಸ್​​ಪಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದೆ.

   ಚಿತ್ರದುರ್ಗದಲ್ಲಿ ನಿವೃತ್ತ ಇಂಜಿನಿಯರ್​​ ಎಂ ರವೀಂದ್ರಗೆ ಸೇರಿದ ಮನೆ, ಫಾರ್ಮ್​ಹೌಸ್​ ಮೇಲೆ ದಾಳಿ ನಡೆದಿದೆ. ಹಿರಿಯೂರು ತಾಲೂಕಿನ ಸೂಗೂರು ಫಾರ್ಮ್​ಹೌಸ್​​ ಮೇಲೆ ದಾಳಿ ನಡೆದಿದೆ. ಜತೆಗೆ, ಐಮಂಗಲ ಬಳಿ ಬಾಟಲಿ ಫ್ಯಾಕ್ಟರಿ ಮೇಲೂ ದಾಳಿ ನಡೆದಿದೆ. ಲೋಕಾಯುಕ್ತ ಎಸ್​ಪಿ ವಾಸುದೇವರಾಮ್ ನೇತೃತ್ವದಲ್ಲಿ ದಾಳಿ ನಡೆದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap