ತುಮಕೂರು:
ತುಮಕೂರಿನಲ್ಲಿ ಏಕಕಾಲಕ್ಕೆ 11 ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆ ನಡೆಸಿದ್ದಾರೆ. ರಿಜಿಸ್ಟ್ರಾರ್ ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಸಾರ್ವಜನಿಕರಿಂದ ಬಂದ ದೂರುಗಳ ಬಂದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ 11 ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಏಕಕಾಲಕ್ಕೆ 11 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತುಮಕೂರು ಲೋಕಾಯುಕ್ತ ಎಸ್ ಪಿ ಲಕ್ಷ್ಮೀ ನಾರಾಯಣ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ತುಮಕೂರು, ಗುಬ್ಬಿ, ಕುಣಿಗಲ್, ಚಿಕ್ಕನಾಯಕನಹಳ್ಳಿ, ತುರುವೇಕೆರೆ, ಮಧುಗಿರಿ, ತಿಪಟೂರು ಸಬ್ ರಿಜಿಸ್ಟರ್ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ.








