ಬೆಂಗಳೂರು : ಭ್ರಷ್ಟರ ನಿದ್ದೆ ಕೆಡಿಸಿದ ಲೋಕ ಅಧಿಕಾರಿಗಳು ….!

ಬೆಂಗಳೂರು:

    ಸುಖ ನಿದ್ದೆಯಲ್ಲಿದ್ದವರಿಗೆ ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಶಾಕ್ ನೀಡಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 51 ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿ ಶೋಧಕಾರ್ಯ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಸಂಬಂಧ ಬಂದಿದ್ದ 12 ದೂರುಗಳ ಸಂಬಂಧ ಈ ಶೋಧಕಾರ್ಯ ಕೈಗೊಳ್ಳಲಾಗಿದೆ. ಲೋಕಾಯುಕ್ತ ಪೊಲೀಸ್‌ನ 100 ಅಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

   ಬೆಂಗಳೂರು ನಗರದ ಆರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು, ಶಿವಮೊಗ್ಗ ಜಿಲ್ಲೆಯ ಇಬ್ಬರು, ಯಾದಗಿರಿ, ತುಮಕೂರಿನಲ್ಲಿ ತಲಾ ಓರ್ವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ತುಮಕೂರಿನ ಕೆಐಎಡಿಬಿ ಅಪರ ನಿರ್ದೇಶಕ ಸಿ.ಟಿ ಮುದ್ದುಕುಮಾರ್ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಸಿ.ಟಿ ಮುದ್ದುಕುಮಾರ್ ಅವರಿಗೆ ಸೇರಿದ ಒಟ್ಟು ಏಳು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಸಿ.ಟಿ ಮುದ್ದುಕುಮಾರ್ ಬೆಂಗಳೂರಿನ ನಾಗರಭಾವಿಯ ಎರಡನೇ ಹಂತದಲ್ಲಿ ವಾಸವಾಗಿದ್ದಾರೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಖನಿಜ ಭವನದಲ್ಲಿ ಕಚೇರಿ ಇದೆ.

   ತುಮಕೂರು ನಗರದ ಬನಶಂಕರಿ ನಗರದಲ್ಲಿ, ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿರುವ ಸಿ.ಟಿ ಮುದ್ದುಕುಮಾರ್ ಅವರಿಗೆ ಸೇರಿದ ಮನೆ ಇದೆ. ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿ ರಂಗನಾಥಪುರದಲ್ಲಿ ಸಿ.ಟಿ ಮುದ್ದುಕುಮಾರ್ ಅವರಿಗೆ ಸೇರಿದ ಫಾರಂಹೌಸ್ ಇದೆ. ಅಲ್ಲದೆ ತುಮಕೂರಿನ ಅಂತರಸನಹಳ್ಳಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಪ್ಲಾಸ್ಟಿಕ್ ಬಾಟಲ್ ತಯಾರಿಕಾ ಘಟಕವಿದೆ. ಈ ಎಲ್ಲ ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap