ಬೆಂಗಳೂರು :
ರಾಜ್ಯದ 69ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಮೆಗಾ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದಿಸಿದ ಆರೋಪದ ಮೇರೆಗೆ ಹಲವು ಅಧಿಕಾರಿಗಳ ಮನೆ- ಕಚೇರಿಗಳ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯಾದ್ಯಂತ 69 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹಲವು ಅಧಿಕಾರಿಗಳ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ಲೋಕಾಯುಕ್ತ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ದಾಳಿ ಹಾಗೂ ದಾಖಲೆಗಳ ಪರಿಶೀಲನೆ ಮುಂದುವರಿದಿದೆ. ಹಲವು ಅಧಿಕಾರಿಗಳು ಎರಡಕ್ಕಿಂತ ಹೆಚ್ಚು ಕಡೆ ಐಷಾರಾಮಿ ಮನೆಗಳು, ಔಟ್ಹೌಸ್ಗಳು, ಆಸ್ತಿಗಳನ್ನು ಹೊಂದಿದ್ದು, ಎಲ್ಲ ಕಡೆಗಳಿಗೂ ಲೋಕಾಯುಕ್ತ ತಂಡಗಳು ಏಕಕಾಲದಲ್ಲಿ ದಾಳಿ ನಡೆಸಿವೆ.