ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಭರ್ಜರಿ ಭೇಟಿ…!

ಬೆಂಗಳೂರು:

    ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿದ್ದು, ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದೆ.

    ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಅವರ ಮನೆ ಮೇಲೆ ದಾಳಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

    ಯಲಹಂಕದಲ್ಲಿರುವ ಗಂಗಧರಯ್ಯ ನಿವಾಸದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ,ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ನಿವೃತ್ತ ಡಿಸಿಎಫ್ ನಾಗರಾಜ್ ಅವರ ಶಿವಮೊಗ್ಗದ ಮನೆ ಹಾಗೂ‌ ಹೊಳಲ್ಕೆರೆ ತಹಶೀಲ್ದಾರ್ ನಾಗರಾಜ್ ಅವರ ಶಿಕಾರಿಪುರದಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

    ನಿವೃತ್ತ ಡಿಸಿಎಫ್ ನಾಗರಾಜ್ ಅವರ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಬಳಿಯ ತೋಟದ ಮನೆಯ ಮೇಲೂ ದಾಳಿ ನಡೆದಿದೆ. ಇಬ್ಬರು ಅಧಿಕಾರಿಗಳ ಏಳು ಸ್ಥಳಗಳ ಮೇಲೆ ಏಕ ಕಾಲಕ್ಕೆ ರೇಡ್ ಆಗಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪುರೆ ನೇತೃತ್ವದಲ್ಲಿ ಇಪ್ಪತ್ತಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

    ಇನ್ನು ಕೋಲಾರ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ತಾ.ಪಂ. ಇಒ ಎನ್​​.ವೆಂಕಟೇಶಪ್ಪಗೆ ಸೇರಿದ 5 ಮನೆಗಳ ಮೇಲೆ ರೇಡ್ ಆಗಿದೆ. ಬಂಗಾರಪೇಟೆ ಪಟ್ಟಣದ ಮೂರು ಕಡೆ ಹಾಗೂ ಮುಳಬಾಗಿಲು ತಾಲೂಕಿನ ತಿಪ್ಪದೊಡ್ಡಿ ಗ್ರಾಮದ 2 ಕಡೆ ಲೋಕಾಯುಕ್ತ ಎಸ್​​ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.ವೆಂಕಟೇಶಪ್ಪ ನವರು ಕಳೆದ 8 ವರ್ಷದಿಂದ ಬಂಗಾರಪೇಟೆ ತಾ.ಪಂ. ಇಒ ಆಗಿ ಕೆಲಸ ಮಾಡುತ್ತಿದ್ದು 2 ದಿನದ ಹಿಂದಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆ‌ ಬಾಗೇಪಲ್ಲಿಗೆ ವರ್ಗಾವಣೆ ಆಗಿದ್ದರು.

    ಚಿತ್ರದುರ್ಗ ಜಿಲ್ಲೆಯಲ್ಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಬೆಂಗಳೂರಿನ BBMP ಎಇಇ ಟಿ.ಹನುಮಂತರಾಯ ಮನೆ ಮೇಲೆ ದಾಳಿ ನಡೆದಿದೆ.ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬೋಚಾಪುರ ಗ್ರಾಮದ ಬಳಿಯ ಫಾರ್ಮ್​ ಹೌಸ್ ಮೇಲೆ ಲೋಕಾಯುಕ್ತ ಎಸ್​ಪಿ ವಾಸುದೇವ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.

    ಬೀದರ್ ಜಿಲ್ಲೆಯ 6 ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದ್ದು, ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ.ಬಸವಕಲ್ಯಾಣ ತಾಲೂಕಿನ ಮುಡಬಿಯ ಉಪ ತಹಶೀಲ್ದಾರ್​ ವಿಜಯಕುಮಾರ್​ ಸ್ವಾಮಿ ಮನೆಗಳ ಮೇಲೆ ದಾಳಿ ನಡೆದಿದೆ.

    ಬೀದರ್​​ನ ಆನಂದ್ ನಗರ ಮನೆ, ಬಸವಕಲ್ಯಾಣದ ಮನೆ, ಕಚೇರಿ, ನಗರದ ಗ್ಯಾರೆಜ್ ಮೇಲೂ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಸಣ್ಣ ನೀರಾವರಿ ಇಲಾಖೆ ಇಇ ಸುರೇಶ್ ಮೇದಾ​ ಅವರ ಬೀದರ್​ನ ಗುರುನಗರದ ಮನೆ, ನೌಬಾದ್​​ನ ಕಚೇರಿಯಲ್ಲಿ ಪರಿಶೀಲನೆ ನಡೆಯುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap