ಬೆಂಗಳೂರು
ಹಲವು ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಭರ್ಜರಿ ತಯಾರಿ ನಡೆಸಿದ್ರೆ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನ ಪಡೆಯಲು ಬಿಜೆಪಿ ಹಾಗೂ ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ.
ಲೋಕಸಭಾ ಚುನಾವನೆಗೆ ಕೆಲವು ತಿಂಗಳು ಮಾತ್ರ ಬಾಕಿ ಉಳಿದಿದ್ದು, ಈಗಾಗಲೇ ಕಾಂಗ್ರೆಸ್ ಕ್ಷೇತ್ರದ ಅಭ್ಯರ್ಥಿ ಆಯ್ಕೆಗಾಗಿ ಪ್ರತಿ ಲೋಕಸಭಾ ಕ್ಷೇತ್ರಕ್ಕೆ ವೀಕ್ಷಕರನ್ನಾಗಿ ಮಂತ್ರಿಗಳನ್ನ ನೇಮಕ ಮಾಡಿದ್ದು, ಇತ್ತ ಬಿಜೆಪಿ- ಜೆಡಿಎಸ್ ನಲ್ಲೂ ಸಹ 28 ಕ್ಷೇತ್ರಗಳನ್ನ ಗೆಲ್ಲಲು ಹಲವು ತಂತ್ರಗಾರಿಕೆಯನ್ನ ನಡೆಸುತ್ತಿದೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದೆ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರೀ ಹೈಕಮಾಂಡ್ ಮತ್ತೆ ಟಿಕೆಟ್ ನೀಡುತ್ತಾ ಎನ್ನುವ ಅನುಮಾನಗಳು ಶುರುವಾಗಿದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಟಿಕೆಟ್ ಗಿಟ್ಟಿಸಿಕೊಳ್ಳಲು ತೀವ್ರ ಪೈಪೋಟಿ ಶುರುವಾಗಿದೆ. ಈಗಾಗಲೇ ಕ್ಷೇತ್ರದ ಟಿಕೆಟ್ ಗಾಗಿ ಹಲವು ಹಿರಿಯ ನಾಯಕರನ್ನ ಭೇಟಿ ಮಾಡುವ ಮೂಲಕ ಟಿಕೆಟ್ ಆಕಾಂಕ್ಷಿಗಳು ಕ್ಷೇತ್ರ ಸುತ್ತಾಟವನ್ನ ನಡೆಸುತ್ತಿದ್ದಾರೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಮಲೆನಾಡು ಹಾಗೂ ಕರಾವಳಿಯನ್ನು ಒಳಗೊಂಡಿದ್ದು, ಬಿಜೆಪಿ ಭದ್ರಕೋಟೆಯಾಗಿದ್ದ ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನ ವಶ ಮಾಡಿಕೊಂಡಿದ್ದು, ಹೀಗಾಗಿ ಈ ಹುಮ್ಮಸಿನಲ್ಲಿ ಕಾಂಗ್ರೆಸ್ ಲೋಕಸಭೆ ಚುನಾವಣೆಯನ್ನ ಎದುರಿಸಲು ವೇದಿಕೆ ಸಿದ್ಧಮಾಡಿಕೊಳ್ಳುತ್ತಿದ್ದು, ಭದ್ರಕೋಟೆಯನ್ನ ಕಳೆದುಕೊಂಡಿರುವ ಬಿಜೆಪಿ ಪಾಳಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ರೂಪಿಸಲು ಸಜ್ಜಾಗುತ್ತಿದೆ.
ಬಿಜೆಪಿ ಪಾಳಯದಲ್ಲಿ ಟಿಕೆಟ್ ಗಾಗಿ ಹಲವು ಜನ ಆಕಾಂಕ್ಷಿಗಳು ಪಟ್ಟು ಹಿಡಿದಿದ್ದು, 2023 ರ ವಿಧಾನಸಭೆ ಚುನಾವಣೆಯಲ್ಲಿ ಐದು ಕ್ಷೇತ್ರಗಳಲ್ಲೂ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿ ಕೋಟೆಯಲ್ಲಿ ಇದೀಗ 2024 ರ ಲೋಕಸಭೆ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ.
ಈಗಾಗಲೇ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಹಾಲಿ ಸಂಸದೆ ಹಾಗೂ ಕೇಂದ್ರ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರು ಟಿಕೆಟ್ ರೇಸ್ ನಲ್ಲಿದ್ದು, ಈ ಕ್ಷೇತ್ರಕ್ಕಾಗಿಯೇ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ಈಗಾಗಲೇ ಬಹಿರಂಗವಾಗಿ ಟಿಕೆಟ್ ಗೆ ಬೇಡಿಕೆ ಇಟ್ಟಿದ್ದಾರೆ. ಅಲ್ಲದೇ ಡಿ ಎನ್ ಜೀವರಾಜ್, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸಹ ಲೋಕಸಭಾ ಚುನಾವಭಾ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.
ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳನ್ನ ನೀಡುವ ಮೂಲಕ ರಾಜ್ಯದಲ್ಲಿ ಬರೋಬ್ಬರಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಸರ್ಕಾರ ರಚಿಸರುವ ಕಾಂಗ್ರೆಸ್ ನಲ್ಲಿ ಎಲ್ಲಾ ಕ್ಷೇತ್ರದಲ್ಲೂ ಟಿಕೆಟ್ ಆಕಾಂಕ್ಷಿಗಳ ಬೇಡಿಕೆ ಇಡುತ್ತಿದ್ದಾರೆ.
ಈಗಾಗಲೇ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಐದು ಕ್ಷೇತ್ರಗಳನ್ನು ಗೆದ್ದಿರುವ ಕಾಂಗ್ರೆಸ್‌ನಲ್ಲಿ ಲೋಕಸಭೆ ಟಿಕೆಟ್‌ಗೆ ಹೆಚ್ಚು ಜನ ಆಕಾಂಕ್ಷಿಗಳು ಬೇಡಿಕೆ ಇಟ್ಟಿದ್ದಾರೆ. ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಡಾ ಕೆ ಪಿ ಅಂಶುಮಂತ್ ಟಿಕೆಟ್ ರೇಸ್ ನಲ್ಲಿ ಮೊದಲಿನವರಾಗಿದ್ದು, ಕಾಂಗ್ರೆಸ್ ಮುಖಂಡರಾದ ಸುಧೀರ್‌ಕುಮಾರ್ ಮೂರಳ್ಳಿ, ಆರತಿ ಕೃಷ್ಣ ಸಹ ಟಿಕೆಟ್ ರೇಸ್‌ನಲ್ಲಿದ್ದಾರೆ ಎಂದು ಹೇಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ