ಬೆಳ್ಳಂಬೆಳಿಗ್ಗೆ ಭ್ರಷ್ಟರಿಗೆ ಷಾಕ್‌ ನೀಡಿದ ಲೋಕಯುಕ್ತ….!

ಬೆಂಗಳೂರು:

     ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಬುಧವಾರ ನಡೆದಿದೆ.

     ಲೋಕಾಯುಕ್ತ ಇನ್‌ಸ್ಪೆಕ್ಟರ್‌ ಅನಿಲ್ ರಾಥೋಡ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ .ಹಾಸನದಲ್ಲಿ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಹೆಲ್ತ್ ಇನ್‌ಸ್ಪೆಕ್ಟರ್‌ ಜಗನ್ನಾಥ್ ನಿವಾಸದ ಮೇಲೆ ಲೋಕಾಯುಕ್ತ ಎಸ್ಪಿ ಮಲ್ಲಿಕ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ತಿರುಮಲೇಶ್, ಇನ್‌ಸ್ಪೆಕ್ಟರ್‌ಗಳಾದ ಬಾಲು, ಶಿಲ್ಪಾ ನೇತೃತ್ವದ ತಂಡ ದಾಳಿ ನಡೆಸಿದೆ. ಜಗನ್ನಾಥ್ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

     ಚಿಕ್ಕಮಗಳೂರಿನಲ್ಲಿ ಕಡೂರು ಪಟ್ಟಣದಲ್ಲಿರುವ ವಾಣಿಜ್ಯ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ‌ ನಡೆಸಿದೆ. ನೇತ್ರಾವತಿ ಅವರು ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿದ್ದಾರೆ. 13 ವರ್ಷದಿಂದ ಅಧಿಕ ಆಸ್ತಿ ಹೊಂದಿರುವ ಆರೋಪ ಹೊತ್ತಿದ್ದಾರೆ. .

     ಇನ್ನು ಮಂಡ್ಯದಲ್ಲಿ ಪಿಡಬ್ಲ್ಯುಡಿ ಇಲಾಖೆ ಇಇ ಹರ್ಷ ಎಂಬವರ ಮನೆ, ಕಚೇರಿ, ಕುಟುಂಬಸ್ಥರು, ಸಂಬಂಧಿಕರ ಮನೆ ಮೇಲೂ ಲೋಕ ದಾಳಿ ಮಾಡಿದೆ. ಇವರ ಮನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿದೆ. ಮಂಡ್ಯದ ಕಚೇರಿ, ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಲಾಗಿದೆ. ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ಆರು ಕಡೆ ದಾಳಿ ಮಾಡಿದ್ದಾರೆ.

     ಮುಡಾ ಇಂಜಿನಿಯರ್ ಯಜ್ಞೇಂದ್ರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.​​ ಮೈಸೂರಿನ ಜೆ.ಪಿ.ನಗರದ ಮನೆ, ವಿಜಯನಗರದ ಅಪಾರ್ಟ್‌ಮೆಂಟ್, ಕೆ.ಆರ್.ನಗರ ತಾಲೂಕಿನ ನಗರ್ಲೆ ಗ್ರಾಮದಲ್ಲಿರುವ ಯಜ್ಞೇಂದ್ರ ಸಹೋದರನ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

    ತುಮಕೂರಿನಲ್ಲೂ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ. ತುಮಕೂರಿನ ಶಿರಾ ಗೇಟ್ ಬಳಿಯಿರುವ KRDL ಇಂಜಿನಿಯರ್​ ಹನುಮಂತರಾಯಪ್ಪ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap