ಪ್ರಜ್ವಲ್‌ ವಿರುದ್ದ ಲುಕ್‌ ಔಟ್‌ ನೋಟೀಸ್‌ ಜಾರಿ ….!

ಬೆಂಗಳೂರು:

    ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಅವರಿಗೆ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.

    ಇದನ್ನೂ ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್‍ಗೆ ಎಸ್‍ಐಟಿ ಅಧಿಕಾರಿಗಳು ಲುಕೌಟ್ ನೋಟಿಸ್ ನೀಡಿದೆ ಎನ್ನಲಾಗಿದ್ದು, ಈ ಮೂಲಕ ಲೊಕೇಟ್ ಆದ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಲಾಗಿದೆ ಅಂತ ತಿಳಿದು ಬಂದಿದೆ.

    ಈ ನಡುವೆವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ವಿಶೇಷ ತನಿಖಾ ತಂಡಕ್ಕೆ ಮನವಿ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಅವರು ಎಸ್‍ಐಟಿ ಮುಖ್ಯಸ್ಥರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ಇದಲ್ಲೇ ಪ್ರಜ್ವಲ್‌ ಅವರು ಮೇ 15 ರಂದು ಭಾರತಕ್ಕೆ ವಾಪಸ್ಸು ಬರುವ ಬಗ್ಗೆ ಮಾಹಿತಿ ದೊರಕಿದೆ.

     ತಲೆಮರೆಸಿಕೊಂಡಿರುವ ಅಥವಾ ಕಾನೂನು ಜಾರಿ ಸಂಸ್ಥೆಗಳಿಂದ ಬೇಕಾಗಿರುವ ವ್ಯಕ್ತಿಯು ದೇಶವನ್ನು ತೊರೆಯಲು ಸಾಧ್ಯವಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಎಲ್‌ಒಸಿ ನೀಡಲಾಗುತ್ತದೆ. ಇದನ್ನು ಹೆಚ್ಚಾಗಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ಬಂದರುಗಳಲ್ಲಿನ ವಲಸೆ ತಪಾಸಣಾ ಕೇಂದ್ರಗಳಲ್ಲಿ ವಲಸೆ ಶಾಖೆಯು ಬಳಸುತ್ತದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap