ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯಬೇಕು

ಚಿತ್ರದುರ್ಗ;

     ವಿದ್ಯಾರ್ಥಿಗಳಲ್ಲಿ ಕಲಿಕೆಯ ಹಂತದಲ್ಲಿಯೇ ಶಿಸ್ತು ಸಂಸ್ಕಾರ ಬೆಳೆಸಬೇಕಾಗಿದೆ. ಪಠ್ಯೇತರ ಚಟುವಟಿಕೆಗಳಲ್ಲಿಯೂ ಅವರನ್ನು ತೊಡಗಿಸಿಕೊಂಡು ಅವರಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಬೇಕು ಎಂದು ಚಿತ್ರದುರ್ಗ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತರಾದ ಶ್ರೀಮತಿ ಸುನೀತ ಮಲ್ಲಿಕಾರ್ಜುನ್ ತಿಳಿಸಿದರು.

     ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜು (ಸ್ವಾಯತ್ತ) ದಲ್ಲಿ ಹೊಸದಾಗಿ ರೋವರ್ಸ್ ಮತ್ತು ರೇಂಜರ್ಸ್‍ರಾಗಿ ನೊಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆ ಸಮವಸ್ತ್ರವನ್ನು ವಿತರಿಸಿ ಮಾತನಾಡಿದರು. ಸಮಾಜಸೇವೆಯಲ್ಲಿ ತೊಡಗಿಸಿಕೊಂಡು ಸಮಾಜಮುಖಿ ಕೆಲಸಗಳನ್ನು ಮಾಡಲು ವಿದ್ಯಾರ್ಥಿಗಳಿಗೆ ಈ ಸಂಸ್ಥೆ ವೇದಿಕೆಯಾಗಿದೆ ಎಂದು ಅವರು ತಿಳಿಸಿದರು.

    ದೈಹಿಕ ಮತ್ತು ಮಾನಸಿಕ ಬೆಳವಣಿಗೆಯ ಜೊತೆಗೆ ಕ್ರಿಯಾಶೀಲತೆಯನ್ನು ಹೆಚ್ಚಿಸಿ ನಾಯಕತ್ವದ ಗುಣವನ್ನು ವಿದ್ಯಾರ್ಥಿಗಳಲ್ಲಿ ಬೆಳಯಿವಂತೆ ರೋವರ್ಸ್ ಮತ್ತು ರೇಂಜರ್ಸ್ ತರಬೇತಿ ಸಹಯ ಮಾಡಲಿದೆ ಎಂದು ಹೇಳಿದರು

     ಜಿಲ್ಲಾ ನೋಡಲ್ ಅಧಿಕಾರಿಯಾದ ಶ್ರೀಮತಿ ಕನಕಲಕ್ಷ್ಮೀ ರವರು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹೊಸ ಚೈತನ್ಯ ತುಂಬಿ ಸಮಾಜಿಕ ಸೇವೆ ಮನೋಭಾವವನ್ನು ಬೆಳೆಯಲು ಹಾಗೂ ದೇಶಾಭಿಮಾನ, ದೇಶಪ್ರೇಮ, ರೂಡಿಸಿಕೊಳ್ಳಲು ಸಹಕಾರಿಯಾಗಿರುತ್ತದೆ ಎಂದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ:.ಟಿ.ಎಲ್.ಸುಧಾಕರ್‍ರವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತ ವಿದ್ಯಾರ್ಥಿಗಳು ಶಿಸ್ತು ಬದ್ಧ ಜೀವನವನ್ನು ರೂಡಿಸಿಕೊಳ್ಳಬೇಕೆಂದರು ರೋವರ್ಸ್ ಮತ್ತು ರೇಂಜರ್ಸ್ ತರಬೇತಿ ಜೀವನದ ದಿಕ್ಕನ್ನು ಬದಲಯಿಸುತ್ತದೆ ಎಂದರು.

     ಕಾರ್ಯಕ್ರಮದಲ್ಲಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಉಪಧ್ಯಾಕ್ಷರಾದ ಡಾ.ಅಬ್ದುಲ್‍ರೆಹಮನ್, ಕಾರ್ಯದರ್ಶಿಗಳಾದ ದೇವರಾಜ್ ಪ್ರಸಾದ್, ರೋವರ್ಸ್ ಲೀಡರ್‍ರಾದ ಪ್ರೊ:ಹೆಚ್.ರಂಗಸ್ವಾಮಿ, ರೇಂಜರ್ಸ್ ಲೀಡರ್‍ರಾದ ಡಾ.ಸಿ.ಬಿ.ಪ್ರೇಮಪಲ್ಲವಿ, ಐಕ್ಯೂಎಸಿ ಸಂಚಾಲಕರಾದ ಪ್ರೊ:ಜಿ.ಡಿ.ಸುರೇಶ್, ಡಾ.ವಿ.ನಾಗಪ್ಪ ಮುಂತಾದವರು ಉಪಸ್ಥಿತಿ ಇದ್ದರು. ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳು ಸ್ವಾಗತ ಮತ್ತು ನಿರೂಪಣೆ ಮಾಡಿದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap