ನಲ್ಗೊಂಡ:
ಲಾರಿಯೊಂದು ಪೆಟ್ರೋಲ್ ಬಂಕ್ ಗೆ ಬರುತ್ತಲೇ ಬೆಂಕಿ ಹೊತ್ತಿದ್ದು, ಬಂಕ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತವೊಂದು ತಪ್ಪಿದೆ.
ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಭೊಂಗೀರ್ ಪೊಲೀಸ್ ಠಾಣಾ ವ್ಯಾಪ್ತಿಯ ನಯರಾ ಪೆಟ್ರೋಲ್ ಬಂಕ್ ನಲ್ಲಿ ಈ ಘಟನೆ ನಡೆದಿದೆ. \ಪೆಟ್ರೋಲ್ ಬಂಕ್‌ಗೆ ಸರಕು ಸಾಗಾಣಿಕಾ ಲಾರಿಯೊಂದು ಡೀಸೆಲ್ ತುಂಬಿಸಿಕೊಳ್ಳಲು ಬರುತ್ತಿದ್ದಂತೆ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲಾರಿ ಡೀಸೆಲ್ ಟ್ಯಾಂಕ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದ್ದು, ಇದರಿಂದ ಕೆಲಕ್ಷಣಗಳ ಕಾಲ ವಿಚಲಿತಗೊಂಡ ಬಂಕ್ ಸಿಬ್ಬಂದಿ ಕೂಡಲೇ ಎಚ್ಚೆತ್ತು ಬಂಕ್ ನಲ್ಲಿದ್ದ ಬೆಂಕಿ ನಂದಿಸುವ ಯಂತ್ರಗಳಿಂದ ಬೆಂಕಿ ನಂದಿಸಿದ್ದಾರೆ. ಆ ಮೂಲಕ ಆಗಬಹುದಾಗಿದ್ದ ದೊಡ್ಡ ಅನಾಹುತವೊಂದನ್ನು ತಪ್ಪಿಸಿದ್ದಾರೆ.