ಭೋಪಾಲ್:
ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣವಚನ ಸ್ವೀಕರಿಸಿದ ಮೋಹನ್ ಯಾದವ್ ಅವರು, ರಾಜ್ಯ ಅನುಮತಿಸಲಾದ ಡೆಸಿಬಲ್ ಮಟ್ಟವನ್ನು ಮೀರಿ ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಇಂದು ಬೆಳಗ್ಗೆಷ್ಟೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದ ಯಾದವ್ ಅವರು ಹೊರಡಿಸಿದ ಮೊದಲ ಆದೇಶ ಇದಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ(ಗೃಹ) ಡಾ. ರಾಜೇಶ್ ರಾಜೋರಾ ಅವರು ಪಿಟಿಐಗೆ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಆದೇಶಗಳ ಆಧಾರದ ಮೇಲೆ ಧ್ವನಿವರ್ಧಕಗಳ ಬಳಕೆಗೆ ಮಾರ್ಗಸೂಚಿಗಳನ್ನು ಸಹ ತಕ್ಷಣ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಧಾರ್ಮಿಕ ಸ್ಥಳಗಳಲ್ಲಿ ಬಳಸುವ ಧ್ವನಿವರ್ಧಕಗಳು ಮತ್ತು ಡಿಜೆ ಸಿಸ್ಟಮ್‌ಗಳ ಧ್ವನಿ ಮಟ್ಟವನ್ನು ಮೇಲ್ವಿಚಾರಣೆ ಮಾಡಲು ಪ್ರತಿ ಜಿಲ್ಲೆಯಲ್ಲೂ ಫ್ಲೈಯಿಂಗ್ ಸ್ಕ್ವಾಡ್ ಅನ್ನು ನಿಯೋಜಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ