ಬೆಂಗಳೂರು:
ಇದೇ ಆಕ್ಟೋಬರ್ 8ರಂದು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ.
ನಗರದ ಜೆ.ಪಿ.ಭವನದಲ್ಲಿ ನಡೆದ ವಿಧನಾಪರಿಷತ್‌ನ ನಾಲ್ಕು ಸ್ಥಾನಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ನ್ನು ಗೆಲ್ಲಿಸಿಕೊಳ್ಳುವ ನಿಟ್ಟಿನಲ್ಲಿ ತಂತ್ರ ರೂಪಿಸುವ ಕುರಿತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳ ಅಭ್ಯರ್ಥಿಗಳು,ಆಯಾ ಕ್ಷೇತ್ರಗಳ ಮುಖಂಡರು, ಶಾಸಕರು ಸೇರಿದಂತೆ ಇತರರೊಂದಿಗೆ ಸಮಾಲೋಚನೆ ನಡೆಸಿದರು.ಪ್ರತಿಯೊಬ್ಬರ ಅಭಿಪ್ರಾಯಗಳನ್ನು ಪಡೆದ ದೇವೇಗೌಡ ಅವರು, ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಪ್ರತಿಯೊಬ್ಬರು ಶ್ರಮಿಸಬೇಕು ಎಂದು ಸೂಚನೆ ನೀಡಿದರು.